ಸಿನಿಮಾ ಸುದ್ದಿ

ಕೋಲ್ಕತಾ: ಬೆಂಗಾಲಿ ನಟಿ ಬಿತಸ್ತಾ ಸಾಹ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಾಲಿ ಚಿತ್ರ ಖ್ಯಾತ ನಟಿ ಬಿತಸ್ತಾ ಸಾಹ ಅವರ ಶವ ಕೊಠಡಿಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಬುಧವಾರ ತಿಳಿದುಬಂದಿದೆ...

ಕೋಲ್ಕತಾ:  ಬೆಂಗಾಲಿ ನಟಿ ಬಿತಸ್ತಾ ಸಾಹ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
ಬೆಂಗಾಲಿ ಚಿತ್ರ ಖ್ಯಾತ ನಟಿ ಬಿತಸ್ತಾ ಸಾಹ
Published On :

ಕೋಲ್ಕತಾ: ಬೆಂಗಾಲಿ ಚಿತ್ರ ಖ್ಯಾತ ನಟಿ ಬಿತಸ್ತಾ ಸಾಹ ಅವರ ಶವ ಕೊಠಡಿಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಬುಧವಾರ ತಿಳಿದುಬಂದಿದೆ.

ಕೋಲ್ಕತಾದ ಆಪಾರ್ಟ್ ಮೆಂಟ್ ವೊಂದರಲ್ಲಿ ನಟಿ ಬಿತಸ್ತಾ ಅವರು ವಾಸವಿದ್ದರು. ನಿನ್ನೆ ಸಂಜೆ ಸ್ನೇಹಿತೆಯೊಬ್ಬರು ಬಿತಸ್ತಾ ಅವರಿಗೆ ಕರೆ ಮಾಡಿದ್ದಾರೆ. ಎಷ್ಟು ಬಾರಿ ಕರೆ ಮಾಡಿದರು ಕರೆ ಸ್ವೀಕರಿಸದ ಹಿನ್ನಲೆಯಲ್ಲಿ ಅಪಾರ್ಟ್ ಮೆಂಟ್ ಬಳಿ ಹೋಗಿದ್ದಾರೆ. ಈ ವೇಳೆ ಘಟನೆ ಬೆಳಕಿಗೆ ಬಂದಿದೆ.

ಮೂಲಗಳು ತಿಳಿಸಿರುವ ಪ್ರಕಾರ ನಟಿಯವರ ಕೈಗಳ ಮೇಲೆ ಗಾಯಗಳು ಕಂಡುಬಂದಿತ್ತು ಎಂದು ತಿಳಿದುಬಂದಿದೆ. ಘಟನಾ ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿಲ್ಲ. ಪ್ರಸ್ತುತ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. ಪ್ರಕರಣವನ್ನು ಆತ್ಮಹತ್ಯೆಯೆಂದು ಪೊಲೀಸರು ಶಂಕಿಸಿದ್ದಾರೆ.

ಸಾವಿಗೂ ಮುನ್ನ ಬಿತಸ್ತಾ ಅವರು ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಪೋಸ್ಟ್ ವೊಂದನ್ನು ಹಾಕಿದ್ದು, ನನ್ನ ದುಃಖವನ್ನು ನೀನು ಎಂದಿಗೂ ಅರ್ಥ ಮಾಡಿಕೊಳ್ಳುವುದಿಲ್ಲ.. ನನ್ನ ತಪ್ಪೇನಿದೆ ಎಂಬುದನ್ನು ಹೇಳು...ಹೃದಯದ ಮಾತುಗಳನ್ನು ತಿಳಿಯದ ನಿನಗೆ ನನ್ನ ಭಾವನೆಗಳನ್ನು ವ್ಯಕ್ತಪಡಿಸಲಾಗುವುದಿಲ್ಲ ಎಂದು ಹೇಳಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.