ನಟ ಅರುಣ್ ಸಾಗರ್ ಗೋದಾಮಿಗೆ ಬೆಂಕಿ: ಲಕ್ಷಾಂತರ ಮೌಲ್ಯದ ಕಲಾಕೃತಿಗಳು ಬೆಂಕಿಗಾಹುತಿ
ಸ್ಯಾಂಡಲ್'ವುಡ್ ನಟ ಹಾಗೂ ಕಲಾ ನಿರ್ದೇಶಕ ಅರುಣ್ ಸಾಗರ್ ಅವರ ಆರ್ಟ್ ಗ್ಯಾಲರಿ ಮತ್ತು ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ಮೌಲ್ಯದ ಕಲಾಕೃತಿಗಳು...

ಬೆಂಗಳೂರು: ಸ್ಯಾಂಡಲ್'ವುಡ್ ನಟ ಹಾಗೂ ಕಲಾ ನಿರ್ದೇಶಕ ಅರುಣ್ ಸಾಗರ್ ಅವರ ಆರ್ಟ್ ಗ್ಯಾಲರಿ ಮತ್ತು ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ಮೌಲ್ಯದ ಕಲಾಕೃತಿಗಳು ಬೆಂಕಿಗಾಹುತಿಯಾಗಿರುವುದಾಗಿ ತಿಳಿದುಬಂದಿದೆ.
ಫೆಬ್ರವರಿ 15 ರಂದು ಅಗ್ನಿ ಅವಘಡ ಸಂಭವಿಸಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಗ್ನಿ ಅವಘಡದಲ್ಲಿ ಚಲನಚಿತ್ರ ಹಾಗೂ ಧಾರವಾಹಿಗಳಿಗೆ ಬಳಸಲಾಗುತ್ತಿದ್ದ ಸಾವಿರಾರು ಅಪೂರ್ವ ಕಲಾಕೃತಿಗಳು ಸುಟ್ಟು ಭಸ್ಮವಾಗಿದ್ದು, ರೂ.75 ಲಕ್ಷಕ್ಕೂ ಅಧಿಕ ನಷ್ಟವಾಗಿದೆ ಎಂದು ಮೂಲಗಳು ತಿಳಿಸಿವೆ.
ಉತ್ತರಹಳ್ಳಿಯಲ್ಲಿ 1.5 ಎಕರೆ ಜಾಗದಲ್ಲಿ ಅರುಣ್ ಸಾಗರ್ ಅವರ ಗೋದಾಮು ಇದ್ದು, 3 ಗೋದಾಮಿನಲ್ಲಿ ಕಲಾಕೃತಿಗಳು ಹಾಗೂ ಇನ್ನಿತರೆ ವಸ್ತುಗಳನ್ನು ಸಂಗ್ರಹಿಸಡಲಾಗಿತ್ತು. ಬುಧವಾರ ಸಂಜೆ ವೇಳೆಗೆ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನ ಪಟ್ಟಿದರಾದರೂ ಬೆಂಕಿ ನಂದಿಸಲು ಸಾಧ್ಯವಾಗಿಲ್ಲ. ನಂತರ ಅಗ್ನಿ ಶಾಮಕದಳ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ. ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕಾಗಮಿಸುವಷ್ಟರಲ್ಲಿ ಬೆಂಕಿ ಕೆನ್ನಾಲಿಗೆ ಮೂರು ಗೋದಾಮುಗಳಿಗೆ ಹೊತ್ತಿಕೊಂಡಿದೆ. ಬೆಂಕಿ ನಂದಿಸಲು ಸಾಕಷ್ಟು ಅಗ್ನಿಶಾಮಕ ದಳದ ಸಿಬ್ಬಂದಿಗಳು ಸಾಕಷ್ಟು ಹರಸಾಹಸ ಪಟ್ಟಿದ್ದಾರೆ.
15 ವರ್ಷಗಳಿಂದ ಪಟ್ಟ ಪರಿಶ್ರಮಗಳು ಗೋದಾಮಿನಲ್ಲಿರಿಸಲಾಗಿತ್ತು. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಲು ಸಾಧ್ಯವಿಲ್ಲ. ಸ್ಥಳದಲ್ಲಿ ವಿದ್ಯುತ್ ಸಂಬಂಧಿಸಿದ ವೈರ್ ಗಳಾಗಲೀ ಇನ್ನಾವುದೇ ವಸ್ತುಗಳಿರಲಿಲ್ಲ. ಪಕ್ಕದಲ್ಲಿ ಖಾಲಿ ಜಾಗವಿದ್ದು, ಅಲ್ಲಿಂದ ಬೆಂಕಿ ಬಂದಿರಬಹುದು. ಯಾವ ಕಾರಣಕ್ಕೆ ಬೆಂಕಿ ತಗುಲಿದೆ ಎಂಬುದು ಗೊತ್ತಾಗುತ್ತಿಲ್ಲ. ನನಗೆ ಯಾರ ಮೇಲೆಯೂ ಅನುಮಾನಗಳಿಲ್ಲ. ಈಗಾಗಲೇ ಪೊಲೀಸರು ಪ್ರಕರಣ ಸಂಬಂಧ ಎಫ್ಐಆರ್ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆಂದು ಅರುಣ್ ಸಾಗರ್ ಅವರು ಖಾಸಗಿ ಮಾಧ್ಯಮವೊಂದರಲ್ಲಿ ಹೇಳಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


