ಮಲಯಾಳಂ ನಟಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ
ಮಲಯಾಳಂ ನಟಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಕೊಚ್ಚಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಇಂದು ವಶಕ್ಕೆ ..

ಕೊಚ್ಚಿ: ಮಲಯಾಳಂ ನಟಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಕೊಚ್ಚಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಇಂದು ವಶಕ್ಕೆ ತೆಗೆದುಕೊಂಡಿದ್ದಾರೆ.
ಪಲಕ್ಕಾಡ್ ನಲ್ಲಿ ಆರೋಪಿಯನ್ನು ಬಂಧಿಸಿರುವ ಪೊಲೀಸರು ಪ್ರಕರಣದ ಮಾಸ್ಟರ್ ಮೈಂಡ್ ಪಲ್ಸರ್ ಸುನಿಗಾಗಿ ಶೋಧ ಮುಂದುವರಿಸಿದ್ದಾರೆ. ಮತ್ತೊಬ್ಬ ಆರೋಪಿ ವಾಗೀಶ್ ಎಂಬಾತನಿಗೂ ಪೊಲೀಸರು ಬಲೆ ಬೀಸಿದ್ದಾರೆ.
ಕೊಚ್ಚಿಯಿಂದ 144 ಕಿಮೀ ದೂರದಲ್ಲಿರುವ ಪಲಕ್ಕಾಡ್ ನಲ್ಲಿ ಮಣಿಕಂಡನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ, ಮಣಿಕಂಡನ್ ಎರ್ನಾಕುಲಂ ಸಮೀಪದ ತಮ್ಮನಂ ಎಂಬ ಗ್ರಾಮದವನು. ಈತ ಸುನಿ ಮತ್ತು ವಾಗೀಶ್ ಜೊತೆ ಕೇರಳ ಹೈಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾನೆ.
ಇಂದು ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ಕೋರ್ಟ್ ಪ್ರಕರಣವನ್ನು ಮಾರ್ಚ್ 3 ಕ್ಕೆ ಮುಂದೂಡಿದೆ. ಇನ್ನೂ ನಟಿಯಿದ್ದ ಕಾರಿನಿಂದ ಸಾಕ್ಷ್ಯಗಳನ್ನು ಕಲೆ ಹಾಕಿರುವ ಪೊಲೀಸರು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಿದ್ದಾರೆ.
ಪೊಲೀಸರು ಇದುವರೆಗೂ ವಡಿವಾಲ್ ಸಲೀಮ್, ಪ್ರದೀಪ್, ಮಾರ್ಟಿನ್ ಮತ್ತು ವಾಗೀಶ್ ಎಂಬ ನಾಲ್ಕು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಎಲ್ಲಾ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ.
ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ನಟಿಗೆ ಕರೆ ಮಾಡಿ ಮಾತನಾಡಿದ್ದಾರೆ, ಫೆಬ್ರವರಿ 17ರ ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


