ಬಂಗಾರ s/o ಬಂಗಾರದ ಮನುಷ್ಯ ಟೀಸರ್ ಶಿವಣ್ಣ ಅಭಿಮಾನಿಗಳಿಗಾಗಿ
ಸೆಂಚ್ಯುರಿ ಸ್ಟಾರ್ ಶಿವರಾಜ್ ಕುಮಾರ್ ಅವರ ಮುಂದಿನ ಚಿತ್ರ ಬಂಗಾರ s/o ಬಂಗಾರದ ಮನುಷ್ಯ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. .

ಬೆಂಗಳೂರು: ಸೆಂಚ್ಯುರಿ ಸ್ಟಾರ್ ಶಿವರಾಜ್ ಕುಮಾರ್ ಅವರ ಮುಂದಿನ ಚಿತ್ರ ಬಂಗಾರ s/o ಬಂಗಾರದ ಮನುಷ್ಯ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ.
ಶಿವಣ್ಣ ಅಭಿಮಾನಿಗಳು ಟೀಸರ್ ಬಿಡುಗಡೆ ಸಂದರ್ಭದಲ್ಲಿ ಉಚಿತ ಅನ್ನ ಸಂತರ್ಪಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಶಿವರಾಜ್ ಕುಮಾರ್ ಬಗ್ಗೆ ಆರಂಭಿಕ ಪರಿಚಯ ಮಾಡಿಸುವ 50 ಸೆಕೆಂಡುಗಳ ಟೀಸರ್ ಇದಾಗಿದ್ದು, ಶಿವಣ್ಣನ ಅಭಿಮಾನಿಗಳಿಗಾಗಿ ತಯಾರು ಮಾಡಲಾಗಿದೆ ಎಂದು ನಿರ್ದೇಶಕ ಯೋಗಿ ಆರ್ ರಾಜ್ ಹೇಳಿದ್ದಾರೆ.
ಹೆಬ್ಬುಲಿ ಸಿನಿಮಾದ ಮಧ್ಯೆ ಈ ಸಿನಿಮಾ ಟೀಸರ್ ಪ್ರದರ್ಶನಗೊಳ್ಳಲಿದೆ. ಏಪ್ರಿಲ್ ನಲ್ಲಿ ಡಾ. ರಾಜ್ ಕುಮಾರ್ ಅವರ ಹುಟ್ಟು ಹಬ್ಬವಿದ್ದು, ಏಪ್ರಿಲ್ ತಿಂಗಳಿನಲ್ಲಿಯೇ ಬಂಗಾರ s/o ಬಂಗಾರದ ಮನುಷ್ಯ ಸಿನಿಮಾ ರಿಲೀಸ್ ಆಗಲಿದೆ ಎಂದು ನಿರ್ದೇಶಕರು ತಿಳಿಸಿದ್ದಾರೆ.
ಟೇಡ್ ಗಳ ಜೊತೆ ಹೊಂದಾಣಿಕೆ ಮಾಡಿಕೊಂಡು ನಾವು ಒಟ್ಟಿಗೆ ಕೆಲಸ ಮಾಡುತ್ತಿದ್ದೇವೆ, ಆದರೆ ಇದು ಅಧಿಕೃತ ಪ್ರಕಟಣೆಯಲ್ಲ ಎಂದು ಸಹ ಅವರು ಹೇಳಿದ್ದಾರೆ.
ಬಂಗಾರ s/o ಬಂಗಾರದ ಮನುಷ್ಯ ಸಿನಿಮಾವನ್ನು ಜಯಣ್ಣ-ಬೋಗೇಂದ್ರ ನಿರ್ಮಿಸುತ್ತಿದ್ದಾರೆ. ವಿದ್ಯಾ ಪ್ರದೀಪ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ವಿ ಹರಿಕೃಷ್ಣ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


