ಸಿನಿಮಾ ಸುದ್ದಿ

ಮಲಯಾಳಂ ನಟಿ ಲೈಂಗಿಕ ದೌರ್ಜನ್ಯ ಪ್ರಕರಣ; ಪ್ರಮುಖ ಆರೋಪಿ ಪಲ್ಸರ್ ಸುನಿ ಬಂಧನ

ದಕ್ಷಿಣ ಭಾರತದ ಖ್ಯಾತ ನಟಿಯ ಅಹರಣ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಸುನಿಲ್ ಕುಮಾರ್ ಅಲಿಯಾಸ್ ಪಲ್ಸರ್ ಸುನಿಯನ್ನು ಗುರುವಾರ ಬಂಧನಕ್ಕೊಳಪಡಿಸಲಾಗಿದೆ...

ಮಲಯಾಳಂ ನಟಿ ಲೈಂಗಿಕ ದೌರ್ಜನ್ಯ ಪ್ರಕರಣ; ಪ್ರಮುಖ ಆರೋಪಿ ಪಲ್ಸರ್ ಸುನಿ ಬಂಧನ
ಪಲ್ಸರ್ ಸುನಿ
Published On :

ಕೊಚ್ಚಿ: ದಕ್ಷಿಣ ಭಾರತದ ಖ್ಯಾತ ನಟಿಯ ಅಹರಣ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಸುನಿಲ್ ಕುಮಾರ್ ಅಲಿಯಾಸ್ ಪಲ್ಸರ್ ಸುನಿಯನ್ನು ಗುರುವಾರ ಬಂಧನಕ್ಕೊಳಪಡಿಸಲಾಗಿದೆ.

ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಕೆಲ ದಿನಗಳ ಹಿಂದಷ್ಟೇ ಪ್ರಮುಖ ಆರೋಪಿ ಸುನಿಲ್ ಹಾಗೂ ಮತ್ತಿಬ್ಬರು ಆರೋಪಿಗಳು ನಿರೀಕ್ಷಣಾ ಜಾಮೀನು ಕೋರಿ ಕೇರಳ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.

ಅರ್ಜಿ ಸಂಬಂಧ ಇಂದು ಎರ್ನಾಕುಲಂನಲ್ಲಿ ಹೆಚ್ಚುವರಿ ಮುಖ್ಯ ನ್ಯಾಯಾಧೀಶರ ಎದುರು ವಿಚಾರಣೆಗೆ ಹಾಜರಾಗಲು ಸುನಿಲ್ ಬಂದಿದ್ದರು. ಈ ವೇಳೆ ಆರೋಪಿ ಸುನಿಲ್ ಪೊಲೀಸರ ಬಳಿ ಶರಣಾಗಿದ್ದಾನೆಂದು ತಿಳಿದುಬಂದಿದೆ.

ಕಳೆದ ಶುಕ್ರವಾರ ರಾತ್ರಿ 7.30 ರ ಸುಮಾರಿಗೆ ತ್ರಿಶೂರ್​ನಿಂದ ಎರ್ನಾಕುಲಂಗೆ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ನಟಿಯನ್ನು ಅಪಹರಿಸಿ ಲೈಂಗಿಕ ಕಿರುಕುಳ ನೀಡಲಾಗಿತ್ತು. ನಂತರ ರಾತ್ರಿ ಪರಿವಟ್ಟಲಂ ಎಂಬಲ್ಲಿ ನಟಿಯನ್ನು ಕಾರಿನಲ್ಲೇ ಬಿಟ್ಟು ಆರೋಪಿಗಳು ಪರಾರಿಯಾಗಿದ್ದರು. ನಂತರ ನಟಿ ನಿರ್ದೇಶಕರೊಬ್ಬರ ಮನೆಗೆ ತೆರಳಿ ಅಲ್ಲಿಂದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪ್ರಕರಣ ಸಂಬಂಧ ಸುನಿಲ್ ಸೇರಿದಂತೆ ಇನ್ನಿತರೆ ಆರೋಪಿಗಳ ವಿರುದ್ಧ ಕೇರಳ ಪೊಲೀಸರು ಐಪಿಸಿ ಸೆಕ್ಸನ್ 342 (ಅಕ್ರಮ ಬಂಧನ), 366 (ಅಪಹರಣ ಅಥವಾ ಮಹಿಳೆಯ ಅಪಹರಣ), 376 (ಅತ್ಯಾಚಾರ, 506 (1) ಮತ್ತು 120 (ಬಿ) (ವಂಚನೆ)) ಅಡಿ ಕೇಸ್ ದಾಖಲಿಸಿಕೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.