"ಕೊಟ್ನಲ್ಲಪ್ಪೋ ಕೈ": ಚೆಕ್ ಬೌನ್ಸ್ ಪ್ರಕರಣದಲ್ಲಿ ನಿರ್ದೇಶಕ ರಿಷಿ ಬಂಧನ
ಕೊಟ್ಲಲ್ಲಪ್ಪೋ ಕೈ ಚಿತ್ರ ವಿವಾದ ಮತ್ತು ನಟಿ ಮೈತ್ರಿಯಾ ಗೌಡ ಅವರನ್ನು ವಿವಾಹವಾಗಿದ್ದೇನೆ ಎಂದು ಹೇಳಿ ಸುದ್ದಿಗೆ ಗ್ರಾಸವಾಗಿದ್ದ ವಿವಾದಿತ ನಿರ್ದೇಶಕ ರಿಷಿ ಚೆಕ್ ಬೌನ್ಸ್ ಪ್ರಕರಣವೊಂದರಲ್ಲಿ ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.

ಬೆಂಗಳೂರು: ಕೊಟ್ಲಲ್ಲಪ್ಪೋ ಕೈ ಚಿತ್ರ ವಿವಾದ ಮತ್ತು ನಟಿ ಮೈತ್ರಿಯಾ ಗೌಡ ಅವರನ್ನು ವಿವಾಹವಾಗಿದ್ದೇನೆ ಎಂದು ಹೇಳಿ ಸುದ್ದಿಗೆ ಗ್ರಾಸವಾಗಿದ್ದ ವಿವಾದಿತ ನಿರ್ದೇಶಕ ರಿಷಿ ಚೆಕ್ ಬೌನ್ಸ್ ಪ್ರಕರಣವೊಂದರಲ್ಲಿ ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.
ನಟನೋರ್ವನಿಂದ ಹಣ ಪಡೆದು ಬಳಿಕ ಆತನಿಗೆ ಚೆಕ್ ನೀಡಿ ವಂಚಿಸಿದ ಆರೋಪ ಮೇರೆಗೆ ಚಿತ್ರ ನಿರ್ದೇಶಕ ರಿಷಿಯನ್ನು ವೈಯಾಲಿಕಾವಲ್ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಇದೇ ಪ್ರಕರಣ ಸಂಬಂಧ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ರಿಷಿಗೆ ವಾರಂಟ್ ಜಾರಿ ಮಾಡಿತ್ತು. ಹೀಗಾಗಿ ಅವರನ್ನು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಮೂಲಳ ಪ್ರಕಾರ ನಿರ್ದೇಶಕ ರಿಷಿ ಒನ್ ವೇ ಹೆಸರಿನ ಚಿತ್ರ ಮಾಡುತ್ತಿರುವುದಾಗಿ ಹೇಳಿ ದೀಪಕ್ ಬಾಬು ಎಂಬಾತನಿಂದ ಸುಮಾರು 6 ಲಕ್ಷ ರು. ಪಡೆದಿದ್ದರಂತೆ. ಚಿತ್ರಕ್ಕೆ ನೀನೇ ನಾಯಕ ಎಂದು ಹೇಳಿ ಹಣ ಪಡೆದಿದ್ದರು. ಬಳಿಕ ಚಿತ್ರದ ಚಿತ್ರೀಕರಣ ಅರ್ಧಕ್ಕೆ ನಿಲ್ಲಿಸಿದ್ದರು. ಹೀಗಾಗಿ ಹಣ ವಾಪಸ್ ನೀಡುವಂತೆ ಅವರನ್ನು ಒತ್ತಾಯಿಸಿದ್ದೆ. ಅಂತಿಮವಾಗಿ ಒಂದು ದಿನ ರಿಷಿ 6 ಲಕ್ಷ ರು.ಗಳ ಚೆಕ್ ನೀಡಿದ್ದರು. ಆದರೆ ಅದನ್ನು ಬ್ಯಾಂಕಿಗೆ ಹಾಕಿದಾಗ ಅದು ಬೌನ್ಸ್ ಆಗಿತ್ತು. ಹೀಗಾಗಿ ದೀಪಕ್ ಪೊಲೀಸರ ಮೊರ ಹೋಗಿದ್ದರು. ಇದೀಗ ನಿರ್ದೇಶಕ ರಿಷಿಯನ್ನು ಪೊಲೀಸರು ಬಂಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


