'ಈಗ' ಚಿತ್ರದ ಅಭಿನಯಕ್ಕಾಗಿ ಸುದೀಪ್ ಗೆ ಆಂಧ್ರದ ಪ್ರತಿಷ್ಠಿತ 'ನಂದಿ ಪ್ರಶಸ್ತಿ'
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಆಂಧ್ರಪ್ರದೇಶ ಸರ್ಕಾರ ನೀಡುವ ಪ್ರತಿಷ್ಠಿತ ನಂದಿ ಪ್ರಶಸ್ತಿ ಆಯ್ಕೆಯಾಗಿದ್ದು,...

Published On :
ಅಮರಾವತಿ: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಆಂಧ್ರಪ್ರದೇಶ ಸರ್ಕಾರ ನೀಡುವ ಪ್ರತಿಷ್ಠಿತ ನಂದಿ ಪ್ರಶಸ್ತಿ ಆಯ್ಕೆಯಾಗಿದ್ದು, 'ಈಗ' ಚಿತ್ರದ ಅಭಿನಯಕ್ಕಾಗಿ 'ಅತ್ಯುತ್ತಮ ಖಳನಟ' ವಿಭಾಗದಲ್ಲಿ ಈ ಪ್ರಶಸ್ತಿ ನೀಡಲಾಗಿದೆ.
ಆಂಧ್ರ ಸರ್ಕಾರ ಇಂದು 2012-13ನೇ ಸಾಲಿನ ಚಲನಚಿತ್ರ ಪ್ರಶಸ್ತಿ ಪ್ರಕಟಿಸಿದ್ದು, ಎಸ್.ಎಸ್.ರಾಜಮೌಳಿ ನಿರ್ದೇಶನದ 'ಈಗ' ಅತ್ಯುತ್ತಮ ಚಿತ್ರ, ಅತ್ಯುತ್ತಮ ನಿರ್ದೇಶಕ, ಅತ್ಯುತ್ತಮ ಚಿತ್ರಕಥೆ, ಸೇರಿದಂತೆ ಹಲವು ಪ್ರಶಸ್ತಿಗಳನ್ನ ಪಡೆದುಕೊಂಡಿದೆ. ತೆಲುಗು ನಟ ನಾನಿ ಮತ್ತು ಸಮಂತಾ ನಾಯಕ, ನಾಯಕಿಯಾಗಿ ಅಭಿನಯಿಸಿದ್ದ 'ಈಗ'ದಲ್ಲಿ ಸುದೀಪ್ ವಿಲನ್ ಆಗಿ ಅಭಿನಯಿಸಿದ್ದರು.
ಸುದೀಪ್ ಅವರು ತೆಲುಗು ಚಿತ್ರದಲ್ಲಿ ಅಭಿನಯಿಸಿದ ಮೊದಲ ಚಿತ್ರದಲ್ಲೇ 'ನಂದಿ ಪ್ರಶಸ್ತಿ' ಪಡೆದಿರುವುದು ನಿಜಕ್ಕೂ ವಿಶೇಷವೇ ಸರಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


