ಬೆಂಗಳೂರು: ನಟಿ ಶಿಲ್ಪಾ ಶೆಟ್ಟಿಗೆ ಪ್ರೈಡ್ ಆಫ್ ಕರ್ನಾಟಕ ಗೌರವ
ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರಿಗೆ ರೌಂಡ್ ಟೇಬಲ್ ಇಂಡಿಯಾ ಹಾಗೂ ಲೇಡಿಸ್ ಸರ್ಕಲ್ ಇಂಡಿಯಾ ನೀಡುವ ಪ್ರೈಡ್ ಆಫ್ ಕರ್ನಾಟಕ ಪ್ರಶಸ್ತಿ ನೀಡಿ ..

ಬೆಂಗಳೂರು: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರಿಗೆ ರೌಂಡ್ ಟೇಬಲ್ ಇಂಡಿಯಾ ಹಾಗೂ ಲೇಡಿಸ್ ಸರ್ಕಲ್ ಇಂಡಿಯಾ ನೀಡುವ ಪ್ರೈಡ್ ಆಫ್ ಕರ್ನಾಟಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು ಆರೋಗ್ಯ ಮತ್ತು ದೈಹಿಕ ದೃಢತೆಯ ವಿಭಾಗದಲ್ಲಿ ನನಗೆ ಪ್ರಶಸ್ತಿ ನೀಡಿರುವುದು ಆಶ್ಚರ್ಯ ಎನ್ನಿಸುತ್ತದೆ. ನಟಿಯಾಗಿಯೇ ಬಹಳಷ್ಟು ಪ್ರಶಸ್ತಿಗಳನ್ನು ಪಡೆದಿರುವ ನನಗೆ ಇದು ವಿಶಿಷ್ಟವಾಗಿದೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ನಾನು ಬಹಳ ದಿನ ವಾಸವಾಗಿದ್ದೆ ಎಂದು ನೆನೆದ ಅವರು, ದೌರ್ಜನ್ಯ ಘಟನೆಗಳ ಬಗ್ಗೆ ಶಾಲೆಗಳಲ್ಲಿ ಬಾಲಕಿಯರಿಗೆ ಜಾಗೃತಿ ಮೂಡಿಸಬೇಕು. ಹುಡುಗರಲ್ಲಿ ಉತ್ತಮ ಸಂಸ್ಕಾರ ಕಲಿಸಬೇಕು. ಆಗಮಾತ್ರ ಇಂತಹ ಘಟನೆಗಳು ಕಡಿಮೆಯಾಗುತ್ತವೆ ಎಂದು ಹೇಳಿದರು.
ಪ್ರಶಸ್ತಿ ಪುರಸ್ಕೃತ ಸಯ್ಯದ್ ಕಿರ್ಮಾನಿ ಮಾತನಾಡಿ, ಕನ್ನಡಿಗನಾಗಿರುವುದು ನನಗೆ ಹೆಮ್ಮೆಯ ವಿಚಾರ. ಕ್ರಿಕೆಟ್ ಅಂಗಳ ಬಿಟ್ಟು ಬಹಳ ದಿನಗಳಾದರೂ ನನ್ನನ್ನು ಗುರುತಿಸಿ ಗೌರವಿಸುತ್ತಿರುವುದು ವಿಶೇಷ ಮತ್ತು ಅದ್ಭುತ ಅನುಭವ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


