ಜಲ್ಲಿಕಟ್ಟು ಪರ ಧ್ವನಿ ಎತ್ತಿದ ರಜನಿಕಾಂತ್
ನಿಷೇಧಗೊಂಡಿರುವ ಜಲ್ಲಿಕಟ್ಟು ಆಚರಣೆಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ದಕ್ಷಿಣ ಭಾರತ ಸೂಪರ್ ಸ್ಟಾರ್ ರಜನಿಕಾಂತ್ ಬ್ಯಾಟಿಂಗ್ ಮಾಡಿದ್ದಾರೆ...

ಚೆನ್ನೈ: ನಿಷೇಧಗೊಂಡಿರುವ ಜಲ್ಲಿಕಟ್ಟು ಆಚರಣೆಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ದಕ್ಷಿಣ ಭಾರತ ಸೂಪರ್ ಸ್ಟಾರ್ ರಜನಿಕಾಂತ್ ಬ್ಯಾಟಿಂಗ್ ಮಾಡಿದ್ದಾರೆ.
ಜಲ್ಲಿಕಟ್ಟು ತಮಿಳರ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಆಚರಣೆಗಳಲ್ಲಿ ಒಂದಾಗಿದ್ದು ಇದನ್ನು ಮುಂದುವರಿಸಿಕೊಂಡು ಹೋಗಲು ಅವಕಾಶ ಕಲ್ಪಿಸಬೇಕು. ತಮಿಳುರು ಅನಾದಿಕಾಲದಿಂದ ಆಚರಿಸಿಕೊಂಡು ಬಂದಿರುವ ಸಂಪ್ರದಾಯ ಇದೆ. ಇದಕ್ಕೆ ನಿಷೇಧ ಹೇರುವುದರಿಂದ ತಮಿಳರ ಭಾವನೆಗಳ ಮೇಲೆ ಸಾಕಷ್ಟು ಪರಿಣಾಮ ಬೀರಲಿದೆ. ಕಾರಣ ಕಾನೂನಾತ್ಮಕವಾಗಿಯಾದರೂ ಜಲ್ಲಿಕಟ್ಟು ನಡೆಸಲು ಅವಕಾಶ ಕಲ್ಪಿಸಬೇಕು ಎಂದು ಹೇಳಿದ್ದಾರೆ.
ಜಲ್ಲಿಕಟ್ಟು ಆಚರಣೆಗಿರುವ ನಿಷೇಧವನ್ನು ತೆರವುಗೊಳಿಸಲು ಸುಪ್ರೀಂಕೋರ್ಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ತಮಿಳುನಾಡಿನಾದ್ಯಂತ ಸಾಕಷ್ಟು ವಿರೋಧ ವ್ಯಕ್ತಗೊಂಡಿದೆ. ಅನೇಕ ಕಡೆ ಪ್ರತಿಭಟನೆಗಳು ನಡೆಯುತ್ತಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


