ಜಲ್ಲಿಕಟ್ಟು ವಿವಾದ: ಟ್ವಿಟರ್ ಖಾತೆಯನ್ನು ನಿಷ್ಕ್ರಿಯಗೊಳಿಸಿದ ನಟಿ ತ್ರಿಷಾ
ಜಲ್ಲಿಕಟ್ಟು ವಿವಾದ ಸಂಬಂಧ ಪ್ರತಿಕ್ರಿಯೆ ನೀಡಿ ಸಾಕಷ್ಟು ಟೀಕೆಗಳಿಗೆ ಒಳಗಾಗಿದ್ದ ಕಾಲಿವುಡ್ ನಟಿ ತ್ರಿಷಾ ಅವರು ಟ್ವಿಟರ್ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ದಾರೆ...

ಚೆನ್ನೈ: ಜಲ್ಲಿಕಟ್ಟು ವಿವಾದ ಸಂಬಂಧ ಪ್ರತಿಕ್ರಿಯೆ ನೀಡಿ ಸಾಕಷ್ಟು ಟೀಕೆಗಳಿಗೆ ಒಳಗಾಗಿದ್ದ ಕಾಲಿವುಡ್ ನಟಿ ತ್ರಿಷಾ ಅವರು ಟ್ವಿಟರ್ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ದಾರೆ.
ಜಲ್ಲಿಕಟ್ಟು ಕ್ರೀಡೆಗೆ ಅನುಮತಿ ನೀಡಬೇಕೆಂದು ತಮಿಳುನಾಡಿನ ಜನತೆ ಪ್ರತಿಭಟನೆ ನಡೆಸುತ್ತಿರುವ ಮಧ್ಯೆಯೇ ತ್ರಿಷಾ ಅವರ ಟ್ಟಿಟರ್ ಖಾತೆಯಿಂದ ಸಂದೇಶವೊಂದು ಬಂದಿತ್ತು. ನಾನು ತಮಿಳುಗಳಾಗಿದ್ದು, 'ಪೆಟಾ'ಗೆ ಬೆಂಬಲ ವ್ಯಕ್ತಪಡಿಸುತ್ತಿದ್ದೇನೆ. ಸಂಪ್ರದಾಯ ಎಷ್ಟು ಹಳೆಯದೆಂಬುದು ಮುಖ್ಯವಲ್ಲ. ಪ್ರಾಣಿಗಳನ್ನು ಹಿಂಸಿಸುವುದನ್ನು ವಿರೋಧಿಸುತ್ತೇನೆಂದು ಹೇಳಲಾಗಿತ್ತು.
ಜಲ್ಲಿಕಟ್ಟು ವಿರೋಧಿಸುವ 'ಪೆಟಾ'ವನ್ನು ಬೆಂಬಲಿಸಿದ್ದ ಕಾರಣಕ್ಕೆ ನಟಿ ತ್ರಿಷಾ ಅವರು ತಮಿಳುನಾಡಿನ ಜನರ ಪಾಲಿಕೆ ವಿಲನ್ ಆಗಿಬಿಟ್ಟಿದ್ದರು, 'ಘರ್ಜನೈ' ಚಿತ್ರದ ಶೂಟಿಂಗ್ ನಲ್ಲಿ ತ್ರಿಷಾ ಪಾಲ್ಕೊಂಡಿದ್ದ ವೇಳೆ ಸ್ಥಳಕ್ಕೆ ಬಂದಿದ್ದ ಹೋರಾಟಗಾರರ ತಂಡ ಪ್ರತಿಭಟನಗಿಳಿದಿತ್ತು. ಪ್ರತಿಭಟನೆ ಹಿನ್ನಲೆಯಲ್ಲಿ ತ್ರಿಷಾ ಅವರು ಶೂಟಿಂಗ್ ನ್ನು ಅರ್ಧದಲ್ಲಿಯೇ ಬಿಟ್ಟು ಮನೆಗೆ ಹೋಗಿದ್ದರು.
ನಂತರ ಟ್ಟಿಟರ್ ನಲ್ಲಿ ಪ್ರತಿಕ್ರಿಯೆ ನೀಡಿದ್ದ ತ್ರಿಷಾ ಅವರು, ಜಲ್ಲಿಕಟ್ಟು ವಿರುದ್ಧವಾಗಿ ನಾನು ಯಾವುದೇ ಹೇಳಿಕೆಯನ್ನು ನೀಡಿಲ್ಲ ಎಂದು ಹೇಳಿದ್ದರು.
ನಾನು ಯಾವುದೇ ಟ್ವೀಟ್'ನ್ನು ಮಾಡಿಲ್ಲ. ನನ್ನ ಟ್ವಿಟರ್ ಖಾತೆಯನ್ನು ದುಷ್ಕರ್ಮಿಗಳು ಹ್ಯಾಕ್ ಮಾಡಿದ್ದು, ಮುಂದಿನ ಕ್ರಮಗಳ ಕುರಿತಂತೆ ನಿರ್ಧಾರ ಕೈಗೊಳ್ಳುವವರೆಗೂ ಖಾತೆಯನ್ನು ನಿಷ್ಕ್ರಿಯಗೊಳಿಸುತ್ತಿದ್ದೇನೆಂದು ಹೇಳಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


