ಸಿನಿಮಾ ಸುದ್ದಿ

ಸಾಮಾಜಿಕ ಜಾಲತಾಣಗಳಿಂದ ದೂರ ಉಳಿಯಲು ನಿರ್ಧಾರ: ಟ್ವಿಟರ್ ಖಾತೆ ನಿಷ್ಕ್ರಿಯಗೊಳಿಸಿದ ನಟ ವಿಶಾಲ್

ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚುತ್ತಿರುವ ದ್ವೇಷ ಹಿನ್ನಲೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಕಾಲಿವುಡ್ ನಟ ವಿಶಾಲ್ ಅವರು, ಇದೀಗ ಸಾಮಾಜಿಕ ಜಾಲತಾಣಗಳಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ, ಅಲ್ಲದೆ, ತಮ್ಮ ಟ್ವಿಟರ್ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ದಾರೆಂದು...

ಸಾಮಾಜಿಕ ಜಾಲತಾಣಗಳಿಂದ ದೂರ ಉಳಿಯಲು ನಿರ್ಧಾರ: ಟ್ವಿಟರ್ ಖಾತೆ ನಿಷ್ಕ್ರಿಯಗೊಳಿಸಿದ ನಟ ವಿಶಾಲ್
ಕಾಲಿವುಡ್ ನಟ ವಿಶಾಲ್
Published On :

ಚೆನ್ನೈ: ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚುತ್ತಿರುವ ದ್ವೇಷ ಹಿನ್ನಲೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಕಾಲಿವುಡ್ ನಟ ವಿಶಾಲ್ ಅವರು, ಇದೀಗ ಸಾಮಾಜಿಕ ಜಾಲತಾಣಗಳಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ, ಅಲ್ಲದೆ, ತಮ್ಮ ಟ್ವಿಟರ್ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

ನಿನ್ನಯಷ್ಟೇ ನಟ ಎಂಜಿಆರ್ ಅವರ 100ನೇ ಜನ್ಮದಿನಾಚರಣೆ ಹಿನ್ನಲೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಪ್ರತಿಕ್ರಿಯೆ ನೀಡಿರುವ ವಿಶಾಲ್ ಅವರು, 'ಪೆಟಾ'ಗೆ ನಾನು ರಾಯಭಾರಿಯಾಗಿಲ್ಲ ಹಾಗೂ ಪೆಟಾಗೆ ನಾನು ಬೆಂಬಲಿಗನೂ ಅಲ್ಲ ಎಂದು ಹೇಳಿದ್ದಾರೆ.

ಇದೇ ವೇಳೆ ನಿಷೇಧಿತ ಜಲ್ಲಿಕಟ್ಟು ಕ್ರೀಡೆಗೆ ಬೆಂಬಲ ವ್ಯಕ್ತಪಡಿಸಿರುವ ಅವರು, ಜಲ್ಲಿಕಟ್ಟು ಕ್ರೀಡೆ ತಮಿಳುನಾಡಿನ ಸಾಂಪ್ರದಾಯಿಕ ಕ್ರೀಡೆಯಾಗಿದ್ದು, ಜಲ್ಲಿಕಟ್ಟು ಕ್ರೀಡೆಗೆ ನಾನು ಎಂದಿಗೂ ಬೆಂಬಲವನ್ನು ವ್ಯಕ್ತಪಡಿಸುತ್ತೇನೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.