ಪ್ರತಿಭಟನೆ ವೇಳೆ ಆಟೋಗೆ ಬೆಂಕಿ; ಪೊಲೀಸರ ಪಾತ್ರ ಪ್ರಶ್ನಿಸಿದ ನಟ ಕಮಲ್ ಹಾಸನ್
ಜಲ್ಲಿಕಟ್ಟು ವಿವಾದ ಸಂಬಂಧ ತಮಿಳುನಾಡು ಪೊಲೀಸರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋಧಗಳು ವ್ಯಕ್ತವಾಗುತ್ತಿದ್ದು, ಹಿಂಸಾಚಾರದಲ್ಲಿ ಪೊಲೀಸರ ಪಾತ್ರ ಕುರಿತಂತೆ ನಟ ಕಮಲ್ ಹಾಸನ್...

ಚೆನ್ನೈ: ಜಲ್ಲಿಕಟ್ಟು ವಿವಾದ ಸಂಬಂಧ ತಮಿಳುನಾಡು ಪೊಲೀಸರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋಧಗಳು ವ್ಯಕ್ತವಾಗುತ್ತಿದ್ದು, ಹಿಂಸಾಚಾರದಲ್ಲಿ ಪೊಲೀಸರ ಪಾತ್ರ ಕುರಿತಂತೆ ನಟ ಕಮಲ್ ಹಾಸನ್ ಅವರು ಮಂಗಳವಾರ ಸ್ಪಷ್ಟನೆ ಕೇಳಿದ್ದಾರೆ.
ಜಲ್ಲಿಕಟ್ಟು ಸಂಬಂಧ ತಮಿಳುನಾಡಿನಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿರುವಂತೆಯೇ ಪೊಲೀಸ್ ಅಧಿಕಾರಿಯೊಬ್ಬ ಆಟೋಗೆ ಬೆಂಕಿ ಇಡುತ್ತಿರುವ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋಧಕ್ಕೆ ಕಾರಣವಾಗಿದೆ. ಕೇವಲ ಸಾಮಾಜಿಕ ಜಾಲತಾಣಗಳಲ್ಲಿ ಅಷ್ಟೇ ಅಲ್ಲದೇ ಮಾಧ್ಯಮಗಳಲ್ಲೂ ಈ ವಿಡಿಯೋ ವ್ಯಾಪಕವಾಗಿ ಸುದ್ದಿಗೆ ಗ್ರಾಸವಾಗುತ್ತಿದ್ದು, ಪೊಲೀಸರ ಕೃತ್ಯಕ್ಕೆ ಎಲ್ಲಡೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ.
ಈ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ನಟ ಕಮಲ್ ಹಾಸನ್ ಅವರು, ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಪ್ರಕರಣದಲ್ಲಿ ಪೊಲೀಸರ ಪಾತ್ರ ಕೇಳಿಬಂದಿದೆ. ಪ್ರತಿಭಟನೆ ಮಹಿಳೆಯರು ಹಾಗೂ ಮಕ್ಕಳ ಮೇಲೂ ಪರಿಣಾಮಗಳನ್ನು ಬೀರಿದ್ದು, ಕೂಡಲೇ ಪೊಲೀಸರು ಸೂಕ್ತ ರೀತಿಯ ಸ್ಪಷ್ಟನೆಯನ್ನು ನೀಡಬೇಕಿದೆ ಎಂದು ಹೇಳಿದ್ದಾರೆ.
ಜಲ್ಲಿಕಟ್ಟು ಪ್ರತಿಭಟನೆಯನ್ನು ನೇತಾರರಿಲ್ಲದ ಪ್ರತಿಭಟನೆ ಎಂದು ಹೇಳುವ ಮೂಲಕ ಕೆಲವರು ಹಾಸ್ಯ ಮಾಡುತ್ತಿದ್ದಾರೆ. ಈ ಬಗ್ಗೆ ನಾನು ಯಾವುದೇ ರೀತಿಯ ಆಕ್ರೋಶಭರಿತ ಹೇಳಿಕೆಯನ್ನು ನೀಡಲು ಇಚ್ಛಿಸುವುದಿಲ್ಲ. ಪ್ರತಿಭಟನೆ ನ್ಯಾಯಸಮ್ಮತವಾಗಿತ್ತು. ನ್ಯಾಯಸಮ್ಮತವಾಗಿರದಿದ್ದರೆ ಅಷ್ಟೊಂದು ಸಂಖ್ಯೆಯಲ್ಲಿ ಜನರು ಸೇರಲು ಸಾಧ್ಯವಾಗುತ್ತಿರಲಿಲ್ಲ.
ಜಲ್ಲಿಕಟ್ಟು ಕ್ರೀಡೆ ಮೇಲೆ ನಿಷೇಧವನ್ನು ಹೇರಬಾರದು. ಕ್ರೀಡೆಗೆ ಅದರದ್ದೇ ಆದ ಕಟ್ಟುಪಾಡುಗಳಿದ್ದು ಅವುಗಳನ್ನು ಪಾಲಿಸಬೇಕು. ಜಲ್ಲಿಕಟ್ಟು ಕ್ರೀಡೆಗೆ ಅನುಮತಿ ನೀಡಬೇಕೆಂದು ಕಳೆದ 20 ವರ್ಷಗಳಿಂದಲೂ ನಾವು ಪ್ರತಿಭಟನೆಯನ್ನು ನಡೆಸುತ್ತಲೇ ಬಂದಿದ್ದೇವೆ. ಸರ್ಕಾರದ ವಿರುದ್ಧ ಪರೋಕ್ಷವಾಗಿ ದಾಳಿ ನಡೆಸುತ್ತಿದ್ದೇವೆ. ಕ್ರೀಡೆ ಬಗ್ಗೆ ಸರ್ಕಾರ ದ್ವಿಮುಖ ಧೋರಣೆ ತೋರುತ್ತಿದ್ದು, ಜಲ್ಲಿಕಟ್ಟು ಕುರಿತ ಕಾನೂನಿನ ವಿರುದ್ಧ ನಾವು ಸಾಕಷ್ಟು ವರ್ಷಗಳಿಂದಲೂ ಪ್ರತಿಭಟನೆ ನಡೆಸುತ್ತಿದ್ದೇವೆಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


