ಸಿನಿಮಾ ಸುದ್ದಿ

ದುಪ್ಪಟ್ಟು ತೆರಿಗೆ ಕುರಿತು ತಮಿಳುನಾಡು ಸರ್ಕಾರ ನಮ್ಮ ಮನವಿ ಪರಿಗಣಿಸಬೇಕು: ರಜನಿಕಾಂತ್

ತಮಿಳುನಾಡು ಸರ್ಕಾರದ ದುಪ್ಪಟ್ಟು ತೆರಿಗೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ತಮಿಳು ಸೂಪರ್ ರಜನಿಕಾಂತ್ ಅವರು,....

ದುಪ್ಪಟ್ಟು ತೆರಿಗೆ ಕುರಿತು ತಮಿಳುನಾಡು ಸರ್ಕಾರ ನಮ್ಮ ಮನವಿ ಪರಿಗಣಿಸಬೇಕು: ರಜನಿಕಾಂತ್
ರಜನಿಕಾಂತ್
Published On :
ಚೆನ್ನೈ: ತಮಿಳುನಾಡು ಸರ್ಕಾರದ ದುಪ್ಪಟ್ಟು ತೆರಿಗೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ತಮಿಳು ಸೂಪರ್ ರಜನಿಕಾಂತ್ ಅವರು, ತಮಿಳು ಚಿತ್ರೋದ್ಯಮವನ್ನು ನಂಬಿಕೊಂಡು ಲಕ್ಷಾಂತರ ಮಂದಿ ಜೀವನ ನಡೆಸುತ್ತಿದ್ದಾರೆ. ತೆರಿಗೆ ಕುರಿತಾದ ನಮ್ಮ ಮನವಿಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಟ್ವೀಟ್‌ ಮೂಲಕ ಮನವಿ ಮಾಡಿದ್ದಾರೆ.
ಸದ್ಯ ಆರೋಗ್ಯ ತಪಾಸಣೆಗಾಗಿ ಅಮೆರಿಕದಲ್ಲಿರುವ ರಜನಿಕಾಂತ್ ಅವರು, ತಮಿಳು ಚಿತ್ರೋದ್ಯಮದ ಹಿತದೃಷ್ಟಿಯಿಂದ ತಮಿಳುನಾಡು ಸರ್ಕಾರ ನಮ್ಮ ಮನವಿಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದಿದ್ದಾರೆ.
ಜಿಎಸ್ ಟಿ ಜೊತೆಗೆ ಶೇ.30ರಷ್ಟು ಮುನ್ಸಿಪಲ್ ತೆರಿಗೆ ವಿಧಿಸುತ್ತಿರುವುದನ್ನು ವಿರೋಧಿಸಿ ಚಲನಚಿತ್ರ ಮಂದಿರಗಳ ಮಾಲೀಕರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಇಂದು ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಪ್ರತಿಭಟನೆಯಿಂದಾಗಿ ನಿತ್ಯ20 ಕೋಟಿ ರುಪಾಯಿ ನಷ್ಟವಾಗಿದೆ ಎಂದು ರಾಜ್ಯ ಸಿನಿಮಾ ಮಂದಿರ ಮಾಲೀಕರು ಹಾಗೂ ವಿತರಕರ ಸಂಘದ ಅಧ್ಯಕ್ಷ ಅಬಿರಾಮಿ ರಾಮನಾಥನ್‌ ಅವರು ಹೇಳಿದ್ದಾರೆ.
ಶೇ.30ರಷ್ಟು ಮುನ್ಸಿಪಲ್ ತೆರಿಗೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ರಾಮನಾಥನ್‌ ಅವರು ಮುಖ್ಯಮಂತ್ರಿ ಎಡಪಾಡಿ ಕೆ ಪಳನಿಸ್ವಾಮಿ ಹಾಗೂ ಹಣಕಾಸು ಸಚಿವ ಡಿ. ಜಯಕುಮಾರ್‌ ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.
ಸಿನಿಮಾ ಮಂದಿರಗಳಲ್ಲಿ ಜಿಎಸ್‌ಟಿ ಜೊತೆಗೆ ರು. 100ರ ಒಳಗಿನ ಟಿಕೆಟ್‌ಗಳಿಗೆ ಶೇ. 18ರಷ್ಟು ತೆರಿಗೆ ವಿಧಿಸಲಾಗುತ್ತದೆ. ರು. 100ಕ್ಕಿಂತ ಹೆಚ್ಚಿರುವ ಮಲ್ಟಿಪ್ಲೆಕ್ಸ್‌ ಟಿಕೆಟ್‌ಗಳಿಗೆ ಶೇ. 28ರಷ್ಟು ತೆರಿಗೆ ವಿಧಿಸಲಾಗುತ್ತದೆ. ಆದರೆ, ಜಿಎಸ್‌ಟಿ ಜತೆಗೆ ಸ್ಥಳೀಯಾಡಳಿತ ತೆರಿಗೆ ಹೇರಿದರೆ, ಟಿಕೆಟ್‌ ಮೌಲ್ಯದ ಅರ್ಧದಷ್ಟು ತೆರಿಗೆ ಪಾವತಿಸಬೇಕಾಗುತ್ತದೆ ಎಂದು ಅಧಿಕಾರಿಗಳು ವಿವರಿಸುತ್ತಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.