ಸಿನಿಮಾ ಸುದ್ದಿ

ದಶಕದ ನಂತರ ಮತ್ತೆ ತೆರೆಯ ಮೇಲೆ ರವಿಚಂದ್ರನ್ -ರಾಧಿಕಾ ಕುಮಾರಸ್ವಾಮಿ

ವೈವಿಧ್ಯಮಯ ಪಾತ್ರಗಳಲ್ಲಿ ಅಭಿನಯಿಸಿರುವ ರಾಧಿಕಾ ಕುಮಾರಸ್ವಾಮಿ, ಕ್ರೇಜಿ ಸ್ಟಾರ್ ರವಿಚಂದ್ರನ್ ನಿರ್ದೇಶನದ ಮುಂದಿನ ಸಿನಿಮಾದಲ್ಲಿ ನಾಯಕಿಯಾಗಿ ...

ದಶಕದ ನಂತರ ಮತ್ತೆ ತೆರೆಯ ಮೇಲೆ ರವಿಚಂದ್ರನ್ -ರಾಧಿಕಾ ಕುಮಾರಸ್ವಾಮಿ
ರಾಧಿಕಾ ಮತ್ತು ರವಿಚಂದ್ರನ್
Published On :
ಬೆಂಗಳೂರು: ವೈವಿಧ್ಯಮಯ ಪಾತ್ರಗಳಲ್ಲಿ ಅಭಿನಯಿಸಿರುವ ರಾಧಿಕಾ ಕುಮಾರಸ್ವಾಮಿ, ಕ್ರೇಜಿ ಸ್ಟಾರ್ ರವಿಚಂದ್ರನ್ ನಿರ್ದೇಶನದ ಮುಂದಿನ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಲಿದ್ದಾರೆ.
ಈಶ್ವರಿ ಪ್ರೊಡಕ್ಷನ್ ನಡಿಯಲ್ಲಿ ರವಿಚಂದ್ರನ್ ಕಥೆ ಬರೆದು ನಿರ್ದೇಶಿಸುತ್ತಿರುವ ರಾಜೇಂದ್ರ ಪೊನ್ನಪ್ಪ ಸಿನಿಮಾದಲ್ಲಿ ಪ್ರಧಾನ ಪಾತ್ರದಲ್ಲಿ ರವಿಚಂದ್ರನ್ ನಟಿಸುತ್ತಿದ್ದಾರೆ. ದಶಕದ ನಂತರ ರವಿಚಂದ್ರನ್ ಜೊತೆ ರಾಧಿಕಾ ಅಭಿನಯಿಸುತ್ತಿದ್ದಾರೆ. 2006 ರಲ್ಲಿ ತೆರೆಕಂಡ ಹಠವಾದಿ ಸಿನಿಮಾದಲ್ಲಿ ರವಿಚಂದ್ರನ್ ಜೋಡಿಯಾಗಿದ್ದರು. 
ಸಿನಿಮಾದಲ್ಲಿ ರವಿಚಂದ್ರನ್ ವಕೀಲರ ಪಾತ್ರ ನಿರ್ವಹಿಸಲಿದ್ದಾರೆ. ದೃಶ್ಯ ಸಿನಿಮಾದ ರಾಜೇಂದ್ರ ಪೊನ್ನಪ್ಪ ಪಾತ್ರವನ್ನೇ ಸಿನಿಮಾ ಟೈಟಲ್ ಆಗಿಸಿದ್ದಾರೆ.
ದಶರಥ, ಬೂಕಾಸುರ ಮತ್ತು ರಾಜೇಂದ್ರ ಪೊನ್ನಪ್ಪ ಚಿತ್ರಗಳು ಒಟ್ಟಿಗೆ ಸೆಟ್ಟೇರಿದ್ದವು, ಸಿನಿಮಾದಲ್ಲಿ ರಾಧಿಕಾ ಪಾತ್ರದ ಬಗ್ಗೆ ಚಿತ್ರತಂಡ ಯಾವುದೇ ಮಾಗಿತಿ ನೀಡಿಲ್ಲ. ಸದ್ಯ ರಾಧಿಕಾ ಕಿರುತೆರೆಯಲ್ಲಿ ಪ್ರಸಾರವಾಗುತ್ತಿರುವ ರಿಯಾಲಿಟಿ ಶೋ ವೊಂದರ ಜಡ್ಜ್ ಆಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.