ನಟಿ ಅಪಹರಣ ಮತ್ತು ಲೈಂಗಿಕ ಕಿರುಕುಳ ಪ್ರಕರಣ: ಕೇರಳದಲ್ಲಿ ನಟ ದಿಲೀಪ್ ಬಂಧನ!
ದಕ್ಷಿಣ ಭಾರತದ ಖ್ಯಾತ ನಟಿ ಅಪಹರಣ ಮತ್ತು ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂನ ಖ್ಯಾತ ನಟ ದಿಲೀಪ್ ಅವರನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ತಿರುವನಂತಪುರಂ: ದಕ್ಷಿಣ ಭಾರತದ ಖ್ಯಾತ ನಟಿ ಅಪಹರಣ ಮತ್ತು ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂನ ಖ್ಯಾತ ನಟ ದಿಲೀಪ್ ಅವರನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ನಿನ್ನೆಯಷ್ಟೇ ಇದೇ ಪ್ರಕರಣ ಸಂಬಂಧ ಬಂಧಿತ ಆರೋಪಿ ಪಲ್ಸರ್ ಸುನಿ ನೀಡಿದ್ದ ಹೇಳಿಕೆ ಮೇರೆಗೆ ನಟ ದಿಲೀಪ್ ಮತ್ತು ನಿರ್ಮಾಪಕ ನಾದಿರ್ಶಾ ಅವರನ್ನು ಸುದೀರ್ಘ ವಿಚಾರಣೆಗೆ ಒಳಪಡಿಸಲಾಗಿತ್ತು. ಇದರ ಬೆನ್ನಲ್ಲೇ ಇಂದು ಕೇರಳ ಪೊಲೀಸರು ನಟ ದಿಲೀಪ್ ರನ್ನು ವಶಕ್ಕೆ ಪಡೆದಿದ್ದಾರೆ. ಮೂಲಗಳ ಪ್ರಕಾರ ನಟ ದಿಲೀಪ್ ತಮ್ಮ ಪತ್ನಿ ದಿವ್ಯಾ ಮಾಧವನ್ ನಿವಾಸದಲ್ಲಿರುವಾಗಲೇ ಮನೆಗೆ ಬಂದ ಪೊಲೀಸರು ಅವರನ್ನು ಬಂಧಿಸಿ ಕರೆದೊಯ್ದಿದ್ದಾರೆ ಎಂದು ತಿಳಿದುಬಂದಿದೆ.
ಪೊಲೀಸ್ ಮೂಲಗಳ ಪ್ರಕಾರ ಪ್ರಕರಣದ ಪ್ರಮುಖ ಆರೋಪಿ ಪಲ್ಸರ್ ಸುನಿ ಹೇಳಿಕೆಯಷ್ಟೇ ಅಲ್ಲದೆ ಪ್ರಕರಣ ಸಂಬಂಧ ಇತ್ತೀಚೆಗೆ ಪೊಲೀಸರು ನಡೆಸಿದ ತನಿಖೆ ವೇಳೆ ಪತ್ತೆಯಾದ ಸಾಕ್ಷ್ಯಾಧಾರಗಳ ಅನ್ವಯ ಪ್ರಕರಣದಲ್ಲಿ ದಿಲೀಪ್ ಅವರ ಪಾತ್ರವಿರುವು ಕುರಿತು ಮಾಹಿತಿ ಲಭ್ಯವಾಗಿದ್ದು, ಸಂಚು ರೂಪಿಸಿದ ಆರೋಪದ ಮೇರೆಗೆ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಅಂತೆಯೇ ರಹಸ್ಯ ಪ್ರದೇಶಕ್ಕೆ ನಟ ದಿಲೀಪ್ ರನ್ನು ಕರೆದೊಯ್ದಿದ್ದು, ಅಲ್ಲಿ ಸತತ ವಿಚಾರಣೆ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಕಳೆದ ಫೆಬ್ರವರಿಯಲ್ಲಿ ಚಿತ್ರೀಕರಣ ಮುಗಿಸಿ ರೂಮಿಗೆ ಆಗಮಿಸುತ್ತಿದ್ದ ನಟಿಯನ್ನು ಆಕೆಯ ಕಾರುಚಾಲಕ ಸಹಾಯದಿಂದ ಅಪಹರಿಸಿ, ಚಲಿಸುತ್ತಿದ್ದ ಕಾರಿನಲ್ಲೇ ಆಕೆಗೆ ಲೈಂಗಿಕ ಕಿರುಕುಳ ನೀಡಲಾಗಿತ್ತು. ಈ ವಿಚಾರ ವ್ಯಾಪಕ ಸುದ್ದಿಯಾದ ಬೆನ್ನಲ್ಲೇ ವ್ಯಾಪಕ ಟೀಕೆಗೂ ಗುರಿಯಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


