ಸಿನಿಮಾ ಸುದ್ದಿ

ನೇಣು ಬಿಗಿದ ಸ್ಥಿತಿಯಲ್ಲಿ 'ಜಗ್ಗಾ ಜಾಸೂಸ್' ನಟಿ ಬಿದಿಶಾ ಶವ ಪತ್ತೆ

ಅಸ್ಸಾಮಿ ಗಾಯಕಿ ಹಾಗೂ ನಟಿ ಬಿದಿಶಾ ಬರ್ಜಬಾರುವಾ ಅವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ನೇಣು ಬಿಗಿದ ಸ್ಥಿತಿಯಲ್ಲಿ 'ಜಗ್ಗಾ ಜಾಸೂಸ್' ನಟಿ ಬಿದಿಶಾ ಶವ ಪತ್ತೆ
ನಟಿ ಬಿದಿಶಾ ಬೆರ್ಜ್ಬರುವಾ
Published On :
ನವದೆಹಲಿ: ಅಸ್ಸಾಮಿ ಗಾಯಕಿ ಹಾಗೂ ನಟಿ ಬಿದಿಶಾ ಬರ್ಜಬಾರುವಾ ಅವರ ಶವ ನೇಣು ಬಿಗಿದ ಸ್ಥಿತಿಯಲ್ಲಿ  ಪತ್ತೆಯಾಗಿದೆ.
ಇತ್ತೀಚೆಗೆ ಬಿಡುಗಡೆಯಾದ ರಣ್ಬೀರ್ ಕಪೂರ್ ಅಭಿನಯದ ಜಗ್ಗಾ ಜಾಸೂಸ್ ಸಿನಿಮಾದಲ್ಲಿ ಬಿದಿಶಾ ನಟಿಸಿದ್ದರು. ಜುಲೈ 17 ಗುರಗಾವ್ ನ ನಿವಾಸದಲ್ಲಿ ಆಕೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಕೆಯ ಸಾವಿಗೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ, 
ಆಕೆಯ ಸಂಬಂಧಿಕರ ಪ್ರಕಾರ ಬಿದಿಶಾ ವೈವಾಹಿಕ ಜೀವನದಲ್ಲಿ ಸಮಸ್ಯೆಯಿತ್ತು, ಪದೇ ಪದೇ ಗಂಡ ಹೆಂಡತಿ ಜಗಳ ಮಾಡಿಕೊಳ್ಳುತ್ತಿದ್ದರು ಎಂದು ಹೇಳಲಾಗಿದೆ, ಐಪಿಸಿ ಸೆಕ್ಷನ್ 306 ರ ಅಡಿಯಲ್ಲಿ ಬಿದಿಶಾ ಪತಿ ವಿರುದ್ಧ ಆಕೆಯ ಸಂಬಂಧಿಕರು ದೂರು ದಾಖಲಿಸಿದ್ದಾರೆ ಎಂದು ಗುರ್ ಗಾವ್ ಪೊಲೀಸ್ ಪಿಆರ್ ಓ ರವೀಂದ್ರ ಕುಮಾರ್ ಹೇಳಿದ್ದಾರೆ.
ಪೊಲೀಸರು ಬಿದಿಶಾ ಸಾವಿನ ಪ್ರಕರಣದ ತನಿಖೆ ನಡೆಸುತ್ತಿದ್ದು, ಮರಣೋತ್ತರ ಪರೀಕ್ಷೆ ನಂತರ ಆಕೆಯ ಶವವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.