ಸಿನಿಮಾ ಸುದ್ದಿ

ಹೈದರಾಬಾದ್ ಡ್ರಗ್ ಮಾಫಿಯಾ: ಎಸ್ಐಟಿ ವಿಚಾರಣೆಗೆ ತೆಲುಗು ನಟ ತರುಣ್ ಹಾಜರು

ಅಕ್ರಮ ಡ್ರಗ್ ವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟ ತರುಣ್ ಅವರು ಶನಿವಾರ ತೆಲಂಗಾಣ ಅಬಕಾರಿ ಇಲಾಖೆಯ....

ಹೈದರಾಬಾದ್ ಡ್ರಗ್ ಮಾಫಿಯಾ: ಎಸ್ಐಟಿ ವಿಚಾರಣೆಗೆ ತೆಲುಗು ನಟ ತರುಣ್ ಹಾಜರು
ಲುಗು ನಟ ತರುಣ್
Published On :
ಹೈದರಾಬಾದ್‌: ಅಕ್ರಮ ಡ್ರಗ್ ವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟ ತರುಣ್ ಅವರು ಶನಿವಾರ ತೆಲಂಗಾಣ ಅಬಕಾರಿ ಇಲಾಖೆಯ ವಿಶೇಷ ತನಿಖಾ ತಂಡ(ಎಸ್‌ಐಟಿ)ದ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಕ್ರಮ ಡ್ರಗ್‌ ವ್ಯವಹಾರಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದು, ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್‌ ನಂತರ ಇಂದು ನಟ ತರುಣ್ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದೆ. 
ತರುಣ್ ಅವರು ಇಂದು ಬೆಳಗ್ಗೆ 10 ಗಂಟೆಯ ಸುಮಾರಿಗೆ ತಮ್ಮ ತಂದೆ ಚಕ್ರಪಾಣಿಯೊಂದಿಗೆ ಅಕ್ಬರಿ ಭವನದಲ್ಲಿರುವ ಎಸ್ ಐಟಿ ಕಚೇರಿಗೆ ಆಗಮಿಸಿದ್ದು, ಟಾಲಿವುಡ್ ನಟನ ವಿಚಾರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೊಕಿರಿ ಚಿತ್ರದ ಖ್ಯಾತಿಯ ನಿರ್ದೇಶಕ ಪುರಿ ಜಗನ್ನಾಥ್ ಅವರು ಸೇರಿದಂತೆ ಟಾಲಿವುಡ್ ನ 12 ನಟ, ನಟಿಯರಿಗೆ ಎಸ್ ಐಟಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದು, ಈಗಾಗಲೇ ಇಬ್ಬರನ್ನು ವಿಚಾರಣೆ ನಡೆಸಿದ್ದು ಇನ್ನು ಆರೋಪಿಗಳು ವಿಚಾರಣೆ ಎದುರಿಸಬೇಕಾಗಿದೆ.
ಡ್ರಗ್‌ ಮಾಫಿಯಾಗೆ ಸಂಬಂಧಿಸಿದಂತೆ ಬಂಧಿಸಲಾಗಿರುವ ವ್ಯಕ್ತಿಯ ಸಂಪರ್ಕದಲ್ಲಿದ್ದ ಚಿತ್ರರಂಗದ 12 ಗಣ್ಯರಿಗೆ ನೋಟಿಸ್‌ ನೀಡಲಾಗಿದೆ. 
ನಟಿ ಚಾರ್ಮಿ ಕೌರ್‌ ಹಾಗೂ ಮುಮೈತ್‌ ಖಾನ್‌ ಅವರಿಗೆ ಇದೇ 20, 21ರಂದು ಎಸ್‌ಐಟಿ ಮುಂದೆ ಹಾಜರಾಗಲು ಸೂಚಿಸಲಾಗಿದೆ. ಬಂಧಿಸಲಾಗಿರುವ ಮಾದಕ ವಸ್ತು ಮಾರಾಟಗಾರರೊಂದಿಗೆ ಸಂಪರ್ಕ ಇರುವ ಚಿತ್ರರಂಗದ ಬಹಳಷ್ಟು ಕಲಾವಿದರನ್ನು ಪ್ರಶ್ನಿಸಲಾಗುತ್ತಿದೆ.
ನಟ ರವಿತೇಜ, ನವ್‌ದೀಪ್‌, ತರುಣ್‌, ಸುಬ್ಬರಾಜು, ನಂದು, ಛಾಯಾಗ್ರಾಹಕ ಶ್ಯಾಮ್‌ ಕೆ ನಾಯ್ಡು ಹಾಗೂ ನಿರ್ದೇಶಕ ಚಿನ್ನ ಅವರನ್ನೂ ಎಸ್‌ಐಟಿ ಪ್ರಶ್ನಿಸಲು ನೋಟಿಸ್‌ ನೀಡಿದೆ.
ಅಕ್ರಮವಾಗಿ ಡ್ರಗ್ ಅನ್ನು ಶಾಲಾ–ಕಾಲೇಜುಗಳಿಗೆ ಸರಬರಾಜು ಮಾಡಲಾಗಿದ್ದು, ನಗರದ ಖಾಸಗಿ ಶಾಲಾ–ಕಾಲೇಜುಗಳ 1000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಡ್ರಗ್‌ ವ್ಯಸನಿಗಳಾಗಿರುವುದನ್ನು ತನಿಖಾಧಿಕಾರಿಗಳು ಪತ್ತೆ ಮಾಡಿದ್ದಾರೆ.
ನಾಸಾದಲ್ಲಿ ಕಾರ್ಯನಿರ್ವಹಿಸಿದ್ದ ಏರೋಸ್ಪೇಸ್‌ ಎಂಜಿನಿಯರ್‌ , ಏಳು ಜನ ಬಿ.ಟೆಕ್‌ ಪದವೀಧರರು ಹಾಗೂ ಬಹು ರಾಷ್ಟ್ರೀಯ ಕಂಪನಿಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ 13 ಜನ ಆರೋಪಿಗಳನ್ನು ಡ್ರಗ್‌ ವ್ಯವಹಾರಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಬಂಧಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.