ಸಿನಿಮಾ ಸುದ್ದಿ

ಚಿತ್ರೀಕರಣದ ವೇಳೆ ಮಾರಾಮಾರಿ: ಸಹನಟ ಭುವನ್ ತೊಡೆ ಕಚ್ಚಿದ ಪ್ರಥಮ್

ಖಾಸಗಿ ವಾಹಿನಿಯೊಂದರ ಧಾರಾವಾಹಿ ಚಿತ್ರೀಕರಣದ ವೇಳೆ ನಟ ಭುವನ್ ಹಾಗೂ 'ಬಿಗ್ ಬಾಸ್' ಖ್ಯಾತಿ ಪ್ರಥಮ್ ನಡುವೆ ಮಾರಾಮಾರಿ ನಡೆದಿದ್ದು, ಪ್ರಥಮ್ ನನ್ನ ತೊಡೆ ಕಚ್ಚಿದ್ದಾರೆಂದು ಭುವನ್ ಸೋಮವಾರ ಆರೋಪ ಮಾಡಿದ್ದಾರೆ...

ಚಿತ್ರೀಕರಣದ ವೇಳೆ ಮಾರಾಮಾರಿ: ಸಹನಟ ಭುವನ್ ತೊಡೆ ಕಚ್ಚಿದ ಪ್ರಥಮ್
ನಟ ಭುವನ್ ಹಾಗೂ ಪ್ರಥಮ್
Published On :

ಬೆಂಗಳೂರು: ಖಾಸಗಿ ವಾಹಿನಿಯೊಂದರ ಧಾರಾವಾಹಿ ಚಿತ್ರೀಕರಣದ ವೇಳೆ ನಟ ಭುವನ್ ಹಾಗೂ 'ಬಿಗ್ ಬಾಸ್' ಖ್ಯಾತಿ ಪ್ರಥಮ್ ನಡುವೆ ಮಾರಾಮಾರಿ ನಡೆದಿದ್ದು, ಪ್ರಥಮ್ ನನ್ನ ತೊಡೆ ಕಚ್ಚಿದ್ದಾರೆಂದು ಭುವನ್ ಸೋಮವಾರ ಆರೋಪ ಮಾಡಿದ್ದಾರೆ. 

ಖಾಸಗಿ ವಾಹಿನಿಯೊಂದರಲ್ಲಿ ಪ್ರಸಾರವಾಗುತ್ತಿರುವ ಸಂಜು ಮತ್ತು ನಾನು ಧಾರಾವಾಹಿಯಲ್ಲಿ ಬಿಗ್ ಬಾಸ್ ಖ್ಯಾತಿಯ ಪ್ರಥಮ್, ಭುವನ್ ಮತ್ತು ಸಂಜನಾ ನಟಿಸುತ್ತಿದ್ದಾರೆ. ಧಾರಾವಹಿಯ ಚಿತ್ರೀಕರಣದ ವೇಳೆ ಭುವನ್ ಹಾಗೂ ಪ್ರಥಮ್ ನಡುವೆತ ಮಾರಾಮಾರಿ ನಡೆದಿದ್ದು, ಇದೀಗ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ. 

ಶನಿವಾರ ಸಂಜೆ ಧಾರಾವಾಹಿಯ ಚಿತ್ರೀಕರಣ ನಡೆಯುತ್ತಿದ್ದ ವೇಳೆ ವಿನಾಕಾರಣ ಜಗಳ ತೆಗೆದ ಪ್ರಥಮ್ ಅವರು ನನ್ನ ತೊಡೆ ಕಚ್ಚಿ ಗಾಯಗೊಳಿಸಿದ್ದಾರೆಂದು ಭುವನ್ ಅವರು ಆರೋಪ ಮಾಡಿದ್ದಾರೆ.
 
ಚಿತ್ರೀಕರಣದ ವೇಳೆ ಪ್ರಥಮ್ ಅವರು ಸಂಜನಾ ಅವರ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ. ಈ ವೇಳೆ ಆಕ್ರೋಶಗೊಂಡಿರುವ ಭುವನ್ ಅವರು ಆ ರೀತಿ ಮಾತನಾಡದಂತೆ ತಾಕೀತು ಮಾಡಿದ್ದಾರೆ. ನಂತರ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಜಗಳ ವಿಕೋಫಕ್ಕೆ ತಿರುಗಿದೆ. ನಂತರ ಪ್ರಥಮ್ ಅವರು ಭುವನ್ ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದು, ಹಲ್ಲೆ ನಡೆಸಿದ್ದಾರೆ. ಕೂಡಲೇ ಸ್ಥಳದಲ್ಲಿದ್ದ ಚಿತ್ರೀಕರಣದ ಸಿಬ್ಬಂದಿಗಳು ಮಧ್ಯೆ ಪ್ರವೇಶ ಮಾಡಿದ್ದಾರೆ. ಆದರೂ ಸುಮ್ಮನಾಗದ ಪ್ರಥಣ್ ಅವರು ಭುವನ್ ಅವರ ತೊಡೆಗೆ ಕಚ್ಚಿದ್ದಾರೆಂದು ಮೂಲಗಳು ಮಾಹಿತಿ ನೀಡಿವೆ. 

ಇನ್ನು ಭುವನ್ ಅವರ ಆರೋಪಕ್ಕೆ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ ಪ್ರಥಣ್ ಅವರು, ನಾನು ಅಪ್ಪಟ ಸಸ್ಯಹಾರಿ, ನಾನು ಯಾರಿಗೂ ಕಚ್ಚಿಲ್ಲ. ಮೊದಲು ಭುವನ್ ಅವರೇ ನನ್ನ ಮೇಲೆ ಕೈ ಮಾಡಿದ್ದು, ಅಲ್ಲಿದ್ದ ಸಿಬ್ಬಂದಿಗಳು ನಮ್ಮ ಜಗಳ ಬಿಡಿಸಿದ್ದರು ಎಂದು ಹೇಳಿಕೊಂಡಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.