ಆರ್ಥಿಕ ನಷ್ಟದಿಂದಾಗಿ ನಟ ಧ್ರುವ ಶರ್ಮಾ ಆತ್ಮಹತ್ಯೆ ಎಂದು ದೂರು ದಾಖಲಿಸಿದ ತಂದೆ ಸುರೇಶ್ ಶರ್ಮಾ
ಮಂಗಳವಾರ ಮುಂಜಾನೆ ಸಾವನ್ನಪ್ಪಿದ ನಟ ಮತ್ತು ಸಿಸಿಎಲ್ ಆಟಗಾರ ಧ್ರುವ ಶರ್ಮಾ ಅನಾರೋಗ್ಯದಿಂದ ಸಾವನ್ನಪ್ಪಿಲ್ಲ, ಬದಲಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಬೆಂಗಳೂರು: ಮಂಗಳವಾರ ಮುಂಜಾನೆ ಸಾವನ್ನಪ್ಪಿದ ನಟ ಮತ್ತು ಸಿಸಿಎಲ್ ಆಟಗಾರ ಧ್ರುವ ಶರ್ಮಾ ಅನಾರೋಗ್ಯದಿಂದ ಸಾವನ್ನಪ್ಪಿಲ್ಲ, ಬದಲಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಮಂಗಳವಾರ ಮುಂಜಾನೆ ಹೆಬ್ಬಾಳದ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ನಟ ಧ್ರುವ ಸಾವಿಗೀಡಾಗಿದ್ದು, ಅವರ ಪಾರ್ಥೀವ ಶರೀರವನ್ನು ಮರಣೋತ್ತರ ಪರೀಕ್ಷೆಗೆ ಎಂಎಸ್ ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ. ಏತನ್ಮಧ್ಯೆ ನಟ ಧ್ರುವ ಅನಾರೋಗ್ಯದಿಂದ ಸಾವನ್ನಪ್ಪಿಲ್ಲ. ಬದಲಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಸ್ವತಃ ಅವರ ತಂದೆ ಸುರೇಶ್ ಶರ್ಮಾ ಅವರು ಇಂದು ಬೆಳಗ್ಗೆ ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ದೂರಿನಲ್ಲಿ ಸಾಲಭಾದೆಯಿಂದ ಧ್ರುವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ ಎಂದು ತಿಳಿದುಬಂದಿದೆ.
ಕೌಟುಂಬಿಕ ಕಲಹ, ತಮ್ಮ ಒಡೆತನದ ಕಂಪೆನಿಯಲ್ಲಿ ನಷ್ಟ ಮತ್ತು ಸಾಲಬಾಧೆಯಿಂದ ಧ್ರುವಶರ್ಮಾ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ದೂರಿನಲ್ಲಿ ಹೇಳಿಕೊಂಡಿರುವ ಬಗ್ಗೆ ವರದಿಯಾಗಿದೆ. ಮೂಲಗಳ ಪ್ರಕಾರ ಮಾನಸಿಕವಾಗಿ ತೀವ್ರವಾಗಿ ನೊಂದಿದ್ದ ಧ್ರುವ ಕಳೆದ ಜುಲೈ 29 ರಂದು ವಿಷ ಸೇವಿಸಿದ್ದರು. ಆ ಬಳಿಕ ಅವರನ್ನು ಹೆಬ್ಬಾಳದಲ್ಲಿರುವ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಅದರೆ ಇಂದು ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ರಾತ್ರಿ ಧ್ರುವ ಶರ್ಮಾ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಧ್ರುವ ಶರ್ಮಾ ಅವರ ಮೃತ ದೇಹ ಸಂಪೂರ್ಣವಾಗಿ ನೀಲಿ ಬಣ್ಣಕ್ಕೆ ತಿರುಗಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


