ಸ್ಲೊವೇನಿಯಾದಲ್ಲಿ ಧ್ರುವ ಸರ್ಜಾ, ರಚಿತಾ ರಾಮ್, ಹರಿಪ್ರಿಯಾ 'ಭರ್ಜರಿ' ಡ್ಯಾನ್ಸ್
ಭರ್ಜರಿ ಸಿನಿಮಾದ ಚಿತ್ರೀಕರಣಕ್ಕಾಗಿ ಧ್ರುವಾ ಸರ್ಜಾ, ರಚಿತಾ ರಾಮ್, ಮತ್ತು ಹರಿಪ್ರಿಯಾ ಸ್ಲೊವೇನಿಯಾಗೆ..

Published On :
ಬೆಂಗಳೂರು: ಭರ್ಜರಿ ಸಿನಿಮಾದ ಚಿತ್ರೀಕರಣಕ್ಕಾಗಿ ಧ್ರುವಾ ಸರ್ಜಾ, ರಚಿತಾ ರಾಮ್, ಮತ್ತು ಹರಿಪ್ರಿಯಾ ಸ್ಲೊವೇನಿಯಾಗೆ ತೆರಳಿದ್ದಾರೆ
'ಭರ್ಜರಿ' ತಂಡ 'ಸ್ಲೊವೇನಿಯಾ' ದಲ್ಲಿ ಹಾಡಿನ ಚಿತ್ರೀಕರಣದಲ್ಲಿ ಭಾಗಿಯಾಗಿದೆ. 'ಸ್ಲೊವೇನಿಯಾ'ದ ಸುಂದರ ತಾಣಗಳಲ್ಲಿ ಹಾಡಿನ ಚಿತ್ರೀಕರಣ ಅದ್ಧೂರಿಯಾಗಿ ನಡೆಯುತ್ತಿದೆ.
ಹರ್ಷ ಕೊರಿಯೋಗ್ರಾಫ್ ನಲ್ಲಿ ರೋಮ್ಯಾಂಟಿಕ್ ಸಾಂಗ್ ನ ಚಿತ್ರೀಕರಣ ನಡೆಯುತ್ತಿದೆ. ಈ ಚಿತ್ರಗಳು ಸಿಟಿ ಎಕ್ಸ್ ಪ್ರೆಸ್ ಗೆ ಸಿಕ್ಕಿವೆ.
ನಟಿ ಹರಿಪ್ರಿಯಾ ತಮ್ಮ ಟ್ವಿಟ್ಟರ್ ನಲ್ಲಿ ಸ್ಲೋವೇನಿಯಾದಲ್ಲಿ ನಡೆದ ಚಿತ್ರೀಕರಣದ ಫೋಟೋಗಳನ್ನು ಶೇರ್ ಮಾಡಿದ್ದಾರೆ. ಧ್ರುವ ಸರ್ಜಾ ಮತ್ತು ರಚಿತಾ ರಾಮ್ ನಟನೆಯ ಹಾಡನ್ನು ಸ್ಲೋವೆನಿಯಾದ ವಿವಿಧ ರಸ್ತೆಗಳಲ್ಲಿ ಚಿತ್ರೀಕರಿಸಲಾಗಿತ್ತು ಎಂದು ಟ್ವೀಟ್ ಮಾಡಿದ್ದಾರೆ.
ಭರ್ಜರಿ ಚಿತ್ರತಂಡದ ಇಂಟ್ರುಡಕ್ಷನ್ ಸಾಂಗ್ ಮಾತ್ರ ಬಾಕಿ ಉಳಿದಿದೆ. ಈ ತಿಂಗಳ ಅಂತ್ಯದಲ್ಲಿ ಈ ಹಾಡಿನ ಚಿತ್ರೀಕರಣ ಪೂರ್ಣಗೊಳ್ಳಲಿದೆ, ನಿರ್ದೇಶಕ ಚೇತನ್ ಕುಮಾರ್ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ನಲ್ಲಿ ಬ್ಯುಸಿಯಾಗಿದ್ದಾರೆ. ಜುಲೈ ಮೊದಲ ವಾರದಲ್ಲಿ ಚಿತ್ರದ ಫೈನಲ್ ಕಾಪಿ ಸಿದ್ಧವಾಗಲಿದೆ.
Hello all from Slovenia
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


