೫೦ ದಿನಗಳ ಪ್ರದರ್ಶನ ಪೂರೈಸಿದ 'ಬಾಹುಬಲಿ೨'; ಗಳಿಕೆಯಲ್ಲಿ ಇನ್ನೂ ಮುಂಚೂಣಿ!
ನಿರ್ದೇಶಕ ಎಸ್ ಎಸ್ ರಾಜಮೌಳಿ ಅವರ 'ಬಾಹುಬಲಿ೨: ಅಂತ್ಯ' ಶುಕ್ರವಾರಕ್ಕೆ ೫೦ ದಿನಗಳನ್ನು ಪೂರೈಸಿದ ಸಂಭ್ರಮದಲ್ಲಿದೆ. ದೇಶದಾದ್ಯಂತ ಇನ್ನು ೧೦೦೦ ತೆರೆಗಳಲ್ಲಿ ತುಂಬಿದ ಪ್ರದರ್ಶನ ಕಾಣುತ್ತಿರುವುದು ವಿಶೇಷ.

Published On :
ಚೆನ್ನೈ: ನಿರ್ದೇಶಕ ಎಸ್ ಎಸ್ ರಾಜಮೌಳಿ ಅವರ 'ಬಾಹುಬಲಿ೨: ಅಂತ್ಯ' ಶುಕ್ರವಾರಕ್ಕೆ ೫೦ ದಿನಗಳನ್ನು ಪೂರೈಸಿದ ಸಂಭ್ರಮದಲ್ಲಿದೆ. ದೇಶದಾದ್ಯಂತ ಇನ್ನು ೧೦೦೦ ತೆರೆಗಳಲ್ಲಿ ತುಂಬಿದ ಪ್ರದರ್ಶನ ಕಾಣುತ್ತಿರುವುದು ವಿಶೇಷ.
ಈ ಸಂಭ್ರಮದ ಆಚರಣೆಗೆ ವಿಶೇಷ ಪೋಸ್ಟರ್ ಒಂದನ್ನು ಬಿಡುಗಡೆ ಮಾಡಿರುವ ನಿರ್ಮಾಪಕರು, ದೇಶದಾದ್ಯಂತ ೫೦ನೆಯ ದಿನ ೧೦೫೦ ತೆರೆಗಳಲ್ಲಿ ಪ್ರದರ್ಶನ ಕಾಣುತ್ತಿರವುದಾಗಿ ತಿಳಿಸಿದ್ದಾರೆ.
ಜಾಗತಿಕವಾಗಿ ೨೦೦೦ಕೋಟಿಗೂ ಹೆಚ್ಚು ಗಳಿಕೆ ಕಂಡಿರುವ 'ಬಾಹುಬಲಿ೨', ಭಾರತೀಯ ಚಿತ್ರರಂಗದ ಹಲವು ದಾಖಲೆಗಳನ್ನು ಮುರಿದಿರುವುದು ವಿಶೇಷ.
ಪ್ರಭಾಸ್, ರಾಣಾ ದಗ್ಗುಬಾಟಿ, ಅನುಷ್ಕಾ ಶೆಟ್ಟಿ ನಟಿಸಿರುವ ಈ ಸಿನೆಮಾ ತೆಲುಗು, ಹಿಂದಿ, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


