ಸಿನಿಮಾ ಸುದ್ದಿ

ಗಣೇಶನ ಕುರಿತು ಟೀಕೆ: ರಾಮ್ ಗೋಪಾಲ್ ವರ್ಮಾಗೆ ಕೋರ್ಟ್ ನಿಂದ ಸಮನ್ಸ್

ಸದಾ ವಿವಾದಾತ್ಮಕ ಟ್ವೀಟ್ ಗಳಿಂದಲೇ ಸುದ್ದಿ ಮಾಡುವ ಬಾಲಿವುಡ್ ಖ್ಯಾತ ನಿರ್ದೇಶಕ ಹಾಗೂ ನಿರ್ಮಾಪಕ ರಾಮ್ ಗೋಪಾಲ್ ...

ಗಣೇಶನ ಕುರಿತು ಟೀಕೆ: ರಾಮ್ ಗೋಪಾಲ್ ವರ್ಮಾಗೆ ಕೋರ್ಟ್ ನಿಂದ ಸಮನ್ಸ್
ರಾಮ್ ಗೋಪಾಲ್ ವರ್ಮಾ
Published On :
ಮುಂಬೈ: ಸದಾ ವಿವಾದಾತ್ಮಕ ಟ್ವೀಟ್ ಗಳಿಂದಲೇ ಸುದ್ದಿ ಮಾಡುವ ಬಾಲಿವುಡ್ ಖ್ಯಾತ ನಿರ್ದೇಶಕ ಹಾಗೂ ನಿರ್ಮಾಪಕ ರಾಮ್ ಗೋಪಾಲ್ ವರ್ಮಾ ಅವರಿಗೆ ಗಣಪತಿ ದೇವರನ್ನು ಟೀಕಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಬುಧವಾರ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.
ಗಣಪತಿ ದೇವರನ್ನು ಟೀಕಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 8ರೊಳಗೆ ವಿಚಾರಣೆಗೆ ಹಾಜರಾಗುವಂತೆ ಮುಂಬೈನ ಅಂಧೇರಿಯ ಮೆಟ್ರೊಪೊಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ರಾಮ್ ಗೋಪಾಲ್ ವರ್ಮಾಗೆ ಸಮನ್ಸ್ ಜಾರಿ ಮಾಡಿದೆ.
2014ರಲ್ಲಿ ಗಣಪತಿಯ ಇರುವಿಕೆಯನ್ನೇ ಪ್ರಶ್ನಿಸಿದ್ದ ರಾಮ್ ಗೋಪಾಲ್ ವರ್ಮಾ ಅವರ ವಿರುದ್ಧ ಇಂಡಸ್ ಕಮ್ಯೂನಿಕೇಷನ್ಸ್ ವ್ಯವಸ್ಥಾಪಕ ನಿರ್ದೇಶಕ ವಿವೇಕ್ ಶೆಟ್ಟಿ ಅವರು ದೂರು ದಾಖಲಿಸಿದ್ದರು.
ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ಗಣಪತಿಯ ಸ್ವತಃ ತನ್ನ ತಲೆಯನ್ನು ಕಾಪಾಡಿಕೊಳ್ಳಲಾರದ ಗಣೇಶ ತನ್ನ ಭಕ್ತರನ್ನು ಹೇಗೆ ಕಾಪಾಡುತ್ತಾನೆ ಎಂದು ಪ್ರಶ್ನಿಸಿದ್ದರು. ಅಲ್ಲದೆ ಗಣೇಶ ಈ ದಿನದಂದು ಹುಟ್ಟಿದ ಎಂಬ ಕಾರಣಕ್ಕಾಗಿ ಗಣೇಶ ಚತುರ್ಥಿಯನ್ನು ಆಚರಿಸುತ್ತಾರೆಯೋ ಅಥವಾ ಶಿವ ಆತನ ತಲೆ ಕಡಿದ ದಿನ ಎಂದು ಈ ಆಚರಣೆ ನಡೆಸಲಾಗುತ್ತಿದೆಯೇ? ಯಾರಾದರೂ ಉತ್ತರಿಸಿ ಎಂದು ವರ್ಮಾ ಟ್ವೀಟಿಸಿದ್ದರು.
ವರ್ಮಾ ಅವರ ಈ ಟ್ವೀಟ್ ಗೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಕೆಟ್ಟ ಅಭಿರುಚಿಯುಳ್ಳ ವರ್ಮಾ ಅವರು ಗಣಪತಿಗೆ ಅವಮಾನ ಮಾಡಿದ್ದಾರೆ ಮತ್ತು ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ವಿವೇಕ್ ಶೆಟ್ಟಿ ಅವರು ದೂರು ದಾಖಲಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.