ನಿರ್ದೇಶಕ ಗುರುಪ್ರಸಾದ್ ಜೊತೆ ಮನಸ್ತಾಪ; 'ಎರಡನೇ ಸಲ' ಚಿತ್ರ ಪ್ರದರ್ಶನಕ್ಕೆ ನಿರ್ಮಾಪಕ ಯೋಗೇಶ್ ತಡೆ
ಯಶಸ್ವಿ ಪ್ರದರ್ಶನ ಕಾಣುತ್ತಿದ್ದ ಎರಡನೇ ಸಲ ಚಿತ್ರ ಇದೀಗ ನಿರ್ದೇಶಕ ಮತ್ತು ನಿರ್ಮಾಪಕರ ನಡುವಿನ ಗುದ್ದಾಟದಿಂದಾಗಿ ಸ್ಥಗಿತಗೊಂಡಿದೆ...

Published On :
ಬೆಂಗಳೂರು: ಯಶಸ್ವಿ ಪ್ರದರ್ಶನ ಕಾಣುತ್ತಿದ್ದ ಎರಡನೇ ಸಲ ಚಿತ್ರ ಇದೀಗ ನಿರ್ದೇಶಕ ಮತ್ತು ನಿರ್ಮಾಪಕರ ನಡುವಿನ ಗುದ್ದಾಟದಿಂದಾಗಿ ಸ್ಥಗಿತಗೊಂಡಿದೆ.
ಮಾರ್ಚ್ 3 ರಂದು ರಾಜ್ಯಾದ್ಯಂತ ಬಿಡುಗಡೆಯಾಗಿದ್ದ ಚಿತ್ರಕ್ಕೆ ವಿಮರ್ಶಕರು ಮೆಚ್ಚುಗೆ ವ್ಯಕ್ತಪಡಿಸಿದ್ದು ಯಶಸ್ವಿಯಾಗಿ ಚಿತ್ರ ಪ್ರದರ್ಶನಗೊಳ್ಳುತ್ತಿತ್ತು. ಆದರೆ ಇದೀಗ ನಿರ್ದೇಶಕ ಗುರುಪ್ರಸಾದ್ ಮತ್ತು ನಿರ್ಮಾಪಕ ಯೋಗೇಶ್ ನಾರಾಯಣ್ ಅವರ ನಡುವಿನ ಗೊಂದಲದಿಂದಾಗಿ ಚಿತ್ರವನ್ನು ಹಿಂಪಡೆಯುತ್ತಿರುವುದಾಗಿ ಯೋಗೇಶ್ ಹೇಳಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಯೋಗೇಶ್ ನಾರಾಯಣ್ ಸದ್ಯ ಪ್ರದರ್ಶನಗೊಳ್ಳುತ್ತಿರುವ ಚಿತ್ರವನ್ನು ದುಖಃದಿಂದ ಹಿಂಪಡೆಯುತ್ತಿದ್ದೇನೆ. ನಿರ್ದೇಶಕ ಗುರುಪ್ರಸಾದ್ ರಿಂದ ಸಿನಿಮಾ ಅರ್ಧ ಸತ್ತಿದೆ. ಚಿತ್ರದ ಪ್ರಚಾರಕ್ಕೆ ಗುರುಪ್ರಸಾದ್ ಬಂದಿಲ್ಲ ಎಂದು ಹೇಳಿದ್ದಾರೆ.
ರಾಜ್ಯಾದ್ಯಂತ ಪ್ರದರ್ಶನಗೊಳ್ಳುತ್ತಿರುವ ಎರಡನೇ ಚಿತ್ರದ ಎಲ್ಲಾ ಶೋಗಳನ್ನು ಸ್ಥಗಿತಗೊಳಿಸಲಾಗಿದ್ದು ಈ ಸಂಬಂಧ ನಾಳೆ ವಾಣಿಜ್ಯ ಮಂಡಳಿಯಲ್ಲಿ ಸಭೆ ನಡೆಯಲಿದೆ ಎಂದು ಯೋಗೇಶ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


