ಸಿನಿಮಾ ಸುದ್ದಿ

ಮಹಿಳೆಯರೆಲ್ಲಾ 'ಸನ್ನಿ' ರೀತಿ ಸಂತೋಷ ನೀಡಬೇಕು: ಆರ್'ಜಿವಿ ಕೀಳು ಶುಭಾಶಯ; ದೂರು ದಾಖಲು

ಬಾಲಿವುಡ್ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅಂತರಾಷ್ಟ್ರೀಯ ಮಹಿಳಾ ದಿನದಂದು ಮಾಡಿ ಟ್ವೀಟ್ ಆನ್ ಲೈನ್ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಟೀಕೆಗೆ ಗುರಿಯಾಗಿದ್ದು, ಗುರುವಾರ ರಾಮ್ ಗೋಪಾಲ್ ವರ್ಮಾ ವಿರುದ್ಧ ಪ್ರಕರಣ...

ಮಹಿಳೆಯರೆಲ್ಲಾ 'ಸನ್ನಿ' ರೀತಿ ಸಂತೋಷ ನೀಡಬೇಕು: ಆರ್'ಜಿವಿ ಕೀಳು ಶುಭಾಶಯ; ದೂರು ದಾಖಲು
ಬಾಲಿವುಡ್ ನಿರ್ದೇಶಕ ರಾಮ್ ಗೋಪಾಲ್ ವರ್ಮಾ
Published On :
ಮುಂಬೈ: ಬಾಲಿವುಡ್ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅಂತರಾಷ್ಟ್ರೀಯ ಮಹಿಳಾ ದಿನದಂದು ಮಾಡಿ ಟ್ವೀಟ್ ಆನ್ ಲೈನ್ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಟೀಕೆಗೆ ಗುರಿಯಾಗಿದ್ದು, ಗುರುವಾರ ರಾಮ್ ಗೋಪಾಲ್ ವರ್ಮಾ ವಿರುದ್ಧ ಪ್ರಕರಣ ದಾಖಲಾಗಿದೆ. 
ಮಾರ್ಚ್ 8 ವಿಶ್ವ ಮಹಿಳಾ ದಿನಾಚರಣೆ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದ ಅವರು, ಪ್ರತಿಯೊಬ್ಬ ಮಹಿಳೆಯೂ ಸನ್ನಿ ಲಿಯೋನ್ ರೀತಿ ಪುರುಷರನ್ನು ಹೇಗೆ ಸಂತೋಷವಾಗಿಡಬೇಕೆಂಬುದನ್ನು ಕಲಿಯಬೇಕು ಎಂದು ಹೇಳಿದ್ದರು. ಈ ಟ್ವೀಟ್ ಗೆ ಸಾಮಾಜಿಕ ಜಾಲತಾಣದಾದ್ಯಂತ ಭಾರೀ ಟೀಕೆಗಳಿಗೆ ಗುರಿಯಾಗಿತ್ತು. 
ತಮ್ಮ ಟ್ವೀಟ್ ಗೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದನ್ನು ಗಮನಿಸಿ ನಂತರ ಮತ್ತೊಂದು ಟ್ವೀಟ್ ಮಾಡಿರುವ ವರ್ಮಾ ಅವರು, ಸನ್ನಿ ಲಿಯೋನ್ ಬಗ್ಗೆ ನಾನು ಮಾಡಿದ ಟ್ವೀಟ್ ಋಣಾತ್ಮಕ ದನಿಯನ್ನು ನೀಡಲಾಗುತ್ತಿದೆ. ಇದರ ಹಿಂದೆ ಕಪಟತನವಿದೆ. ಸನ್ನಿ ಬಹಳ ಪ್ರಮಾಣಿಕ ಮತ್ತು ಇತರ ಯಾವುದೇ ಮಹಿಳೆಯರಿಗಿಂತಲೂ ಹೆಚ್ಚು ಆತ್ಮಗೌರವವನ್ನು ಹೊಂದಿರುವ ಮಹಿಳೆಯಾಗಿದ್ದಾರೆಂದು ಹೇಳಿದ್ದಾರೆ. 
ವರ್ಮಾ ಅವರ ಟ್ವೀಟ್ ಗೆ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ವರ್ಮಾ ಟ್ವೀಟ್ ನಲ್ಲಿ ಬಳಸಿದ್ದ ವಾಕ್ಯಗಳಿಗೆ ಆಕ್ಷೇಪ ವ್ಯಕ್ತಪಡಿಸಿದ ಗೋವಾದ ಸಾಮಾಜಿಕ ಕಾರ್ಯಕರ್ತೆ ವಿಶಾಖ ಮಾಂಬ್ರೆ ಎಂಬುವವರು ವರ್ಮಾ ವಿರುದ್ಧ ದೂರು ದಾಖಲಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.