ಕೇಂದ್ರ ಸರ್ಕಾರಿ ನೌಕರರಿಗೆ ಯುಗಾದಿ ಗಿಫ್ಟ್: ಶೇ.2 ರಷ್ಟು ತುಟ್ಟಿ ಭತ್ಯೆ ಏರಿಕೆ
ಈ ವರ್ಷದ ಜನವರಿ 1 ರಿಂದ ಅನ್ವಯವಾಗುವಂತೆ ಕೇಂದ್ರ ಸರ್ಕಾರ ತನ್ನ ನೌಕರರಿಗೆ ಶೇ. ರಷ್ಟು ತುಟ್ಟಿ ಭತ್ಯೆ ಏರಿಸಿ ಯುಗಾದಿ ಹಬ್ಬದ ಗಿಫ್ಟ್ ನೀಡಿದೆ...

Published On :
ನವದೆಹಲಿ: ಈ ವರ್ಷದ ಜನವರಿ 1 ರಿಂದ ಅನ್ವಯವಾಗುವಂತೆ ಕೇಂದ್ರ ಸರ್ಕಾರ ತನ್ನ ನೌಕರರಿಗೆ ಶೇ. ರಷ್ಟು ತುಟ್ಟಿ ಭತ್ಯೆ ಏರಿಸಿ ಯುಗಾದಿ ಹಬ್ಬದ ಗಿಫ್ಟ್ ನೀಡಿದೆ. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡಿದೆ. .
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಶೇ. 2 ರಷ್ಟು ತುಟ್ಟಿ ಭತ್ಯೆ ಹೆಚ್ಚಳಕ್ಕೆ ಅನುಮೋದನೆ ನೀಡಿದೆ. 2017 ರ ಜನವರಿ 1 ರಿಂದಲೇ ಪೂರ್ವಾನ್ವಯವಾಗುವಂತೆ ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡಲಾಗಿದೆ.
ಇದರಿಂದ 48.85 ಲಕ್ಷ ಸರ್ಕಾರಿ ನೌಕರರು ಮತ್ತು 55.51 ಲಕ್ಷ ಪಿಂಚಣಿದಾರರಿಗೆ ಅನುಕೂಲವಾಗಲಿದೆ. ಇದರಿಂದ ಕೇಂದ್ರ ಸರ್ಕಾರಕ್ಕೆ 5,833 ಕೋಟಿ ರು ಹೊರೆಯಾಗಲಿದ್ದು, ಪ್ರತಿವರ್ಷ 6, 833.50 ಕೋಟಿ. ವೆಚ್ಚ ವಾಗಲಿದೆ. ಈ ಹಿಂದೆ ಕೇಂದ್ರ ಸರ್ಕಾರ 2016ರ ಜುಲೈ 1 ರಿಂದ ತುಟ್ಟಿ ಭತ್ಯೆ ಶೇ. 2 ರಷ್ಟು ಹೆಚ್ಚಿಸಿತ್ತು. ಈ ವರ್ಷ ಸಹ ಅಷ್ಟೇ ಪ್ರಮಾಣದಲ್ಲಿ ಏರಿಕೆ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


