ಸಿನಿಮಾ ಸುದ್ದಿ

ಆರ್.ಕೆ ನಗರ ಉಪ ಚುನಾವಣೆಯಲ್ಲಿ ನಾನು ಯಾರನ್ನು ಬೆಂಬಲಿಸುವುದಿಲ್ಲ: ರಜನೀಕಾಂತ್

ತಮಿಳುನಾಡಿನ ಆರ್ .ಕೆ ನಗರ ವಿಧಾನ ಸಭೆ ಕ್ಷೇತ್ರಕ್ಕೆ ಏಪ್ರಿಲ್ 12 ರಂದು ನಡೆಯುವ ಉಪ ಚುನಾವಣೆಯಲ್ಲಿ ತಾವು ಯಾವ ಪಕ್ಷಕ್ಕೂ ಬೆಂಬಲ ನೀಡುವುದಿಲ್ಲ ಎಂದು ..

ಆರ್.ಕೆ ನಗರ ಉಪ ಚುನಾವಣೆಯಲ್ಲಿ ನಾನು ಯಾರನ್ನು ಬೆಂಬಲಿಸುವುದಿಲ್ಲ: ರಜನೀಕಾಂತ್
ರಜನೀಕಾಂತ್
Published On :

ಚೆನ್ನೈ: ತಮಿಳುನಾಡಿನ ಆರ್ .ಕೆ ನಗರ ವಿಧಾನ ಸಭೆ ಕ್ಷೇತ್ರಕ್ಕೆ ಏಪ್ರಿಲ್ 12 ರಂದು  ನಡೆಯುವ ಉಪ ಚುನಾವಣೆಯಲ್ಲಿ ತಾವು ಯಾವ ಪಕ್ಷಕ್ಕೂ ಬೆಂಬಲ ನೀಡುವುದಿಲ್ಲ ಎಂದು ಸೂಪರ್ ಸ್ಟಾರ್ ರಜನೀಕಾಂತ್ ಹೇಳಿದ್ದಾರೆ.

ಬಿಜೆಪಿಯಿಂದ ಸ್ಪರ್ಧಿಸಿರುವ ಸಂಗೀತ ಸಂಯೋಜಕ ಗಂಗೈ ಅಮರಾನ್ ಮಂಗಳವಾರ ರಜನೀಕಾಂತ್ ಅವರನ್ನು ಭೇಟಿ ಮಾಡಿ ಬೆಂಬಲ ನೀಡುವಂತೆ ಕೋರಿದ್ದಾರೆ. ರಜನೀಕಾಂತ್ ತಮ್ಮ ತಂದೆಗೆ ಜಯ ಸಿಗಲೆಂದು ಹಾರೈಸಿದ್ದಾರೆ ಎಂದು ಗಂಗೈ ಅಮರಾನ್ ಪುತ್ರ ವೆಂಕಟ್ ಪ್ರಭು ಹೇಳಿದ್ದಾರೆ.

ಮುಂಬರುವ ಚುನಾವಣೆಯಲ್ಲಿ ನನ್ನ ಬೆಂಬಲ ಯಾವ ಪಕ್ಷಕ್ಕೂ ಇಲ್ಲ ಎಂದು  ರಜನೀಕಾಂತ್ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.

ಡಿಸೆಂಬರ್ 5 ರಂದು ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ನಿಧನರಾದ ಹಿನ್ನೆಲೆಯಲ್ಲಿ ಆರ್.ಕೆ ನಗರ ವಿಧಾನ ಸಭಾ ಕ್ಷೇತ್ರ ತೆರವಾಗಿತ್ತು. ಈ ಸ್ಥಾನಕ್ಕೆ ಮುಂದಿನ ತಿಂಗಳು ಅಂದರೆ ಏಪ್ರಿಲ್ 12 ರಂದು ಚುನಾವಣೆ ನಡೆಯಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.