ಕನ್ನಡದ 'ದಿ ವಿಲನ್' ಚಿತ್ರಕ್ಕೆ ಬಾಲಿವುಡ್ ದಿಗ್ಗಜ ಮಿಥುನ್ ಚಕ್ರವರ್ತಿ ಎಂಟ್ರಿ
ಸ್ಯಾಂಡಲ್ವುಡ್ ನ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಮತ್ತು ಅಭಿನಯ ಚಕ್ರವರ್ತಿ ಸುದೀಪ್ ಅಭಿನಯದ ದಿ ವಿಲನ್ ಚಿತ್ರಕ್ಕೆ ಇದೀಗ ಬಾಲಿವುಡ್ ದಿಗ್ಗಜ ಮಿಥುನ್ ಚಕ್ರವರ್ತಿ...

Published On :
ಸ್ಯಾಂಡಲ್ವುಡ್ ನ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಮತ್ತು ಅಭಿನಯ ಚಕ್ರವರ್ತಿ ಸುದೀಪ್ ಅಭಿನಯದ ದಿ ವಿಲನ್ ಚಿತ್ರಕ್ಕೆ ಇದೀಗ ಬಾಲಿವುಡ್ ದಿಗ್ಗಜ ಮಿಥುನ್ ಚಕ್ರವರ್ತಿ ಎಂಟ್ರಿಕೊಟ್ಟಿದ್ದಾರೆ.
ಜೋಗಿ ಪ್ರೇಮ್ ತಮ್ಮ ನಿರ್ದೇಶನದ ಬಹುನಿರೀಕ್ಷಿತ ಚಿತ್ರ ದಿ ವಿಲನ್ ಗೆ ಬಾಲಿವುಡ್ ನಟನನ್ನು ಕರೆದಿದ್ದಾರೆ. ಸುಮಾರು 350 ಚಿತ್ರಗಳಲ್ಲಿ ಅಭಿನಯಿಸಿರುವ ಮಿಥುನ್ ಚಕ್ರವರ್ತಿ ಸಹ ದಿ ವಿಲನ್ ಚಿತ್ರದಲ್ಲಿ ನಟಿಸಲು ಒಪ್ಪಿಗೆ ನೀಡಿದ್ದಾರೆ. ಇನ್ನು ಮುಂದಿನ ವಾರ ಬೆಳಗಾವಿಯಲ್ಲಿ ನಡೆಯಲಿರುವ ಚಿತ್ರೀಕರಣದಲ್ಲಿ ಮಿಥುನ್ ಕಿಚ್ಚ ಸುದೀಪ್ ಮುಂದೆ ಕಾಣಿಸಿಕೊಳ್ಳುತ್ತಿದ್ದಾರೆ.
ಸುದೀಪ್ ಮತ್ತು ಮಿಥುನ್ ಚಕ್ರವರ್ತಿ ನಡುವಿನ ಚಿತ್ರೀಕರಣಕ್ಕೆ ನಿರ್ದೇಶಕ ಪ್ರೇಮ್ ಎಲ್ಲಾ ರೀತಿಯ ತಯಾರಿ ಮಾಡಿಕೊಂಡಿದ್ದಾರೆ. ಇನ್ನು ಬಹುಕೋಟಿ ಚಿತ್ರವನ್ನು ಸಿಆರ್ ಮನೋಹರ್ ನಿರ್ಮಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


