ಸಿನಿಮಾ ಸುದ್ದಿ

ಹೇಳಬೇಕಿದ್ದನ್ನು ಅಭಿಮಾನಿಗಳಿಗೆ ಹೇಳಿದ್ದೇನೆ: ನಟ ರಜನಿಕಾಂತ್

ಹೇಳಿಬೇಕಿದಿದ್ದನ್ನು ಅಭಿಮಾನಿಗಳಿಗೆ ಹೇಳಿದ್ದೇನೆ. ಸೂಕ್ತ ಸಮಯಕ್ಕೆ ಸರಿಯಾಗಿ ನಿರ್ಧಾರಗಳನ್ನು ಕೈಗೊಳ್ಳುತ್ತೇನೆಂದು ಸೂಪರ್ ಸ್ಟಾರ್ ನಟ ರಜನಿಕಾಂತ್ ಅವರು ಬುಧವಾರ...

ಹೇಳಬೇಕಿದ್ದನ್ನು ಅಭಿಮಾನಿಗಳಿಗೆ ಹೇಳಿದ್ದೇನೆ: ನಟ ರಜನಿಕಾಂತ್
ಸೂಪರ್ ಸ್ಟಾರ್ ನಟ ರಜನಿಕಾಂತ್
Published On :
ಚೆನ್ನೈ: ಹೇಳಿಬೇಕಿದಿದ್ದನ್ನು ಅಭಿಮಾನಿಗಳಿಗೆ ಹೇಳಿದ್ದೇನೆ. ಸೂಕ್ತ ಸಮಯಕ್ಕೆ ಸರಿಯಾಗಿ ನಿರ್ಧಾರಗಳನ್ನು ಕೈಗೊಳ್ಳುತ್ತೇನೆಂದು ಸೂಪರ್ ಸ್ಟಾರ್ ನಟ ರಜನಿಕಾಂತ್ ಅವರು ಬುಧವಾರ ಹೇಳಿದ್ದಾರೆ. 
ಅಭಿಮಾನಿಗಳನ್ನು ಭೇಟಿಯಾಗುವ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ತಮ್ಮ ರಾಜಕೀಯ ಸೇರ್ಪಡೆ ಕುರಿತಂತೆ ಉಂಟಾಗಿರುವ ಗೊಂದಲಗಳ ಕುರಿತಂತೆ ಪ್ರತಿಕ್ರಿಯೆ ನೀಡಿದ್ದಾರೆ. 
ಹೇಳಿಬೇಕಿದಿದ್ದನ್ನು ಅಭಿಮಾನಿಗಳಿಗೆ ಈಗಾಗಲೇ ಹೇಳಿದ್ದೇನೆ. ಇದಕ್ಕಿಂತ ಹೆಚ್ಚಾಗಿ ಹೇಳಲು ಇನ್ನಾವುದೂ ಇಲ್ಲ. ಇದೀಗ ನಾನು ನನ್ನ ಅಭಿಮಾನಿಗಳನ್ನು ಭೇಟಿಯಾಗಲು ಹೋಗುತ್ತಿದ್ದೇನೆ. ಸರಿಯಾದ ಸಮಯಕ್ಕೆ ಸರಿಯಾದ ನಿರ್ಧಾರವನ್ನು ತೆಗೆದುಕೊಳ್ಳುತ್ತೇನೆಂದು ತಿಳಿಸಿದ್ದಾರೆ. 
ಕೆಲ ದಿನಗಳ ಹಿಂದಷ್ಟೇ ಅಭಿಮಾನಿಗಳನ್ನು ಭೇಟಿ ಮಾಡಿ ಮಾತನಾಡಿದ್ದ ರಜನಿಕಾಂತ್ ಅವರು, ಮೈತ್ರಿ ಪಕ್ಷವೊಂದಕ್ಕೆ ಬೆಂಬಲ ನೀಡುವ ಮೂಲಕ 21 ವರ್ಷಗಳ ಹಿಂದೆಯೇ ನಾನು ತಪ್ಪನ್ನು ಮಾಡಿದ್ದೆ. ಇದೊಂದು ಆಕಸ್ಮಿಕವಾಗಿ ಆದ ತಪ್ಪು. ಇಂತಹ ತಪ್ಪನ್ನು ಮತ್ತೆ ಮಾಡುವುದಿಲ್ಲ. ನಾನು ಯಾವುದೇ ರಾಜಕೀಯ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿಲ್ಲ. ಒಂದು ವೇಳೆ ರಾಜಕೀಯಕ್ಕೆ ಎಂಟ್ರಿ ಕೊಡಲು ನಿರ್ಧಾರ ಕೈಗೊಂಡಿದ್ದೇ ಆದರೆ, ಕೆಟ್ಟ ಜನರು ಸೇರ್ಪಡೆಗೊಳ್ಳಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಅಂತಹವರು ದೂರ ಇರುವಂತೆ ಮಾಡುತ್ತೇನೆ. ಕೆಲ ರಾಜಕೀಯ ನಾಯಕರು ನನ್ನ ಹೆಸರನ್ನು ಬಳಸಿಕೊಳ್ಳುತ್ತಿದ್ದಾರೆ. ನಾನೊಬ್ಬ ನಟನಾಗಿದ್ದು, ಅದೇ ಹಾದಿಯಲ್ಲಿ ನಡೆಯಬೇಕೆಂದು ದೇವರು ಬಯಸಿದ್ದಾರೆ. ದೇವರು ನನಗೆ ನೀಡಿರುವ ಕೆಲಸವನ್ನು ನಾನು ಮಾಡುತ್ತೇನೆ. ಭವಿಷ್ಯದಲ್ಲಿ ಏನಾಗುತ್ತದೆ ಎಂಬುದು ನನಗೆ ಗೊತ್ತಿಲ್ಲ ಎಂದು ಹೇಳಿದ್ದರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.