'ಕಾಳ ಕರಿಕಾಳನ್' ರಜನಿಕಾಂತ್ ಮುಂದಿನ ಸಿನಿಮಾ
ಕಬಾಲಿ ಯಶಸ್ಸಿನ ನಂತರ ಸೂಪರ್ ಸ್ಟಾರ್ ರಜನಿಕಾಂತ್ ಮತ್ತೊಂದು ಸಿನಿಮಾ ಮಾಡುತ್ತಿದ್ದಾರೆ.

Published On :
ನವದೆಹಲಿ: ಕಬಾಲಿ ಯಶಸ್ಸಿನ ನಂತರ ಸೂಪರ್ ಸ್ಟಾರ್ ರಜನಿಕಾಂತ್ ಮತ್ತೊಂದು ಸಿನಿಮಾ ಮಾಡುತ್ತಿದ್ದಾರೆ. ಪಾ ಸಿನಿಮಾದ ನಿರ್ದೇಶಕ ರಂಜಿತ್ ರಜನಿ ಸಿನಿಮಾವನ್ನು ನಿರ್ದೇಶಿಸುತ್ತಿದ್ದು, ಹೊಸ ಸಿನಿಮಾಗೆ ಕಾಳ ಕರಿಕಾಳನ್ ಎಂದು ಶೀರ್ಷಿಕೆ ನೀಡಲಾಗಿದೆ.
ಧನುಷ್ ಹೋಮ್ ಬ್ಯಾನರ್ 'ವಂಡರ್ಬಾರ್ ಫಿಲ್ಮ್ಸ್' ಅಡಿಯಲ್ಲಿ ಚಿತ್ರ ನಿರ್ಮಾಣವಾಗುತ್ತಿದ್ದು, ಅಧಿಕೃತ ಟ್ವಿಟರ್ ಖಾತೆಯಲ್ಲಿ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ನ್ನು ಪೋಸ್ಟ್ ಮಾಡಿದ್ದಾರೆ. ರಜನಿಕಾಂತ್ ಅವರ ಹೊಸ ಚಿತ್ರದ ಚಿತ್ರೀಕರಣ ಮೇ.28 ರಿಂದ ಪ್ರಾರಂಭವಾಗುವ ನಿರೀಕ್ಷೆ ಇದೆ.
ಕಾಳ ಕರಿಕಾಳನ್ ಚಿತ್ರದಲ್ಲಿ ವಿದ್ಯಾಬಾಲನ್ ನಾಯಕ ನಟಿಯಾಗಿ ನಟಿಸಬೇಕಿತ್ತಾದರೂ ಸಮಯದ ಅಭಾವದಿಂದಾಗಿ ಹುಮಾ ಖುರೇಷಿ ನಾಯಕ ನಟಿಯಾಗಿ ಆಯ್ಕೆಯಾಗಿದ್ದಾರೆ. ರಜನಿಕಾಂತ್ ರ ಹೊಸ ಸಿನಿಮಾಗೆ ಸಂತೋಷ್ ನಾರಾಯಣನ್ ಸಂಗೀತ ನೀಡಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


