ಸಿನಿಮಾ ಸುದ್ದಿ

ವೈವಾಹಿಕ ಜೀವನಕ್ಕೆ ಕಾಲಿಟ್ಟ ಖ್ಯಾತ ನಟ ಲೂಸ್ ಮಾದ ಯೋಗಿ

ಖ್ಯಾತ ಸ್ಯಾಂಡಲ್​ವುಡ್​ ನಟ ಲೂಸ್​ ಮಾದ ಯೋಗೇಶ್​ ಗುರುವಾರ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದು, ತಮ್ಮ ಬಾಲ್ಯದ ಗೆಳತಿ ಸಾಹಿತ್ಯ ಅವರನ್ನು ವರಿಸಿದ್ದಾರೆ.

ವೈವಾಹಿಕ ಜೀವನಕ್ಕೆ ಕಾಲಿಟ್ಟ ಖ್ಯಾತ ನಟ ಲೂಸ್ ಮಾದ ಯೋಗಿ
ವೈವಾಹಿಕ ಜೀವನಕ್ಕೆ ಕಾಲಿಟ್ಟ ಖ್ಯಾತ ನಟ ಲೂಸ್ ಮಾದ ಯೋಗಿ
Published On :
ಬೆಂಗಳೂರು: ಖ್ಯಾತ ಸ್ಯಾಂಡಲ್​ವುಡ್​ ನಟ ಲೂಸ್​ ಮಾದ ಯೋಗೇಶ್​ ಗುರುವಾರ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದು, ತಮ್ಮ ಬಾಲ್ಯದ ಗೆಳತಿ ಸಾಹಿತ್ಯ ಅವರನ್ನು ವರಿಸಿದ್ದಾರೆ.
ಈ ಹಿಂದೆ ನಿಶ್ಚಯವಾದಂತೆಯೇ ಕೋಣನ ಕುಂಟೆಯಲ್ಲಿರುವ ಶ್ರೀ ಕನ್ವೆಂಷನ್​ ಹಾಲ್​ನಲ್ಲಿ ಗುರುವಾರ ಬೆಳಗ್ಗೆ 6 ಗಂಟೆಯ ಶುಭ ಮುಹೂರ್ತದಲ್ಲಿ ನಟ ಯೋಗಿ ವಿವಾಹ ಬಂಧನಕ್ಕೆ ಒಳಗಾದರು. ಕುರುಬ ಸಂಪ್ರದಾಯದಂತೆ ಯೋಗಿ  ಮದುವೆ ಸಂಪ್ರದಾಯಬದ್ಧವಾಗಿ ನೆರವೇರಿತು ಎನ್ನಲಾಗಿದೆ. 
ಮದುವೆ ಸಂದರ್ಭದಲ್ಲಿ ಸಾಹಿತ್ಯ ಮತ್ತು ಯೋಗಿ ಕುಟುಂಬದವರು ಮತ್ತು ಬಂಧು ಮಿತ್ರರು ಮಾತ್ರ ಹಾಜರಿದ್ದರು. ಇನ್ನು ಮದುವೆಗೆ ಚಿತ್ರರಂಗದ ಖ್ಯಾತನಾಮರು ಆಗಮಿಸಿದ್ದರು. ಚಿತ್ರರಂಗದ ಹಿರಿಯ ನಟ ಶಿವರಾಜ್​ ಕುಮಾರ್​  ಅವರು ನವದಂಪತಿಗಳಿಗೆ ಶುಭ ಹಾರೈಸಿದ್ದು ವಿಶೇಷವಾಗಿತ್ತು.
ಐಟಿ ಉದ್ಯೋಗಿಯಾಗಿರುವ ಸಾಹಿತ್ಯ ಅವರು ನಟ ಯೋಗೀಶ್ ಅವರ ಬಾಲ್ಯದ ಗೆಳತಿಯಾಗಿದ್ದಾರೆ. ಯೋಗಿ ತುಂಬಾ ದಿನಗಳಿಂದಲೇ ಸಾಹಿತ್ಯ ಅವರನ್ನು ಪ್ರೀತಿಸುತ್ತಿದ್ದರಂತೆ. ಸಾಹಿತ್ಯ ಅವರೂ ಕೂಡ ಯೋಗಿಯನ್ನ ಅವರನ್ನು ಪ್ರೀತಿಸುತ್ತಿದ್ದರು. ಬಳಿಕ ಈ ವಿಚಾರವನ್ನು ಪೋಷಕರಿಗೆ ತಿಳಿಸಿ ಕಳೆದ ಜೂನ್ 11ರಂದು ವಿವಾಹ ನಿಶ್ಚಿತಾರ್ಥ ನೆರವೇರಿಸಿಕೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.