ಜನಪ್ರಿಯತೆ ಇದೆ ಎಂದ ಮಾತ್ರಕ್ಕೆ ನಟರು ರಾಜಕೀಯ ಪ್ರವೇಶಿಸುವುದು ಸೂಕ್ತವಲ್ಲ: ಪ್ರಕಾಶ್ ರೈ
ಚಿತ್ರ ನಟರು ರಾಜಕೀಯಕ್ಕೆ ಸೇರ್ಪಡೆಗೊಳ್ಳುತ್ತಿರುವದು ದುರಂತ ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ...

Published On :
ಬೆಂಗಳೂರು: ಜನಪ್ರಿಯತೆ ಇದೆ ಎಂದ ಮಾತ್ರಕ್ಕೆ ನಟರು, ಕಲಾವಿದರು, ರಾಜಕೀಯ ಪ್ರವೇಶಿಸುವುದು ಸೂಕ್ತವಲ್ಲ ಎಂದು ಬಹುಭಾಷಾ ನಟ ಪ್ರಕಾಶ್ ರೈ ಅಭಿಪ್ರಾಯಪಟ್ಟಿದ್ದಾರೆ.
ನ.12 ರಂದು ಬೆಂಗಳೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿರುವ ಪ್ರಕಾಶ್ ರೈ, ಜನಪ್ರಿಯತೆ ಇದೆ ಎಂಬ ಮಾತ್ರಕ್ಕೆ ನಟರು ರಾಜಕಾರಣವನ್ನು ಆಯ್ಕೆ ಮಾಡುತ್ತಿರುವುದು ದೇಶದಲ್ಲಿ ನಡೆಯುತ್ತಿರುವ ದುರಂತ ಎಂದು ಪ್ರಕಾಶ್ ರೈ ಹೇಳಿದ್ದಾರೆ. ಇನ್ನು ಅಭಿಮಾನಿಗಳು ಸಹ ತಮ್ಮ ನೆಚ್ಚಿನ ನಟ ಎಂದು ಮತದಾನ ಮಾಡದೇ, ಜವಾಬ್ದಾರಿಯುತ ನಾಗರಿಕರಾಗಿ ಮತದಾನ ಮಾಡಬೇಕಿದೆ ಎಂದು ರೈ ಕರೆ ನೀಡಿದ್ದಾರೆ.
ಮಾಧ್ಯಮ ಸಂವಾದದಲ್ಲಿ ಮಾತನಾಡಿರುವ ಅವರು, ರಾಜಕೀಯಕ್ಕೆ ಸೇರ್ಪಡೆಗೊಳ್ಳುವ ಯಾವುದೇ ಉದ್ದೇಶ ನನಗಿಲ್ಲ. ನಾನು ಯಾವುದೇ ರಾಜಕೀಯ ಪಕ್ಷಕ್ಕೂ ಸೇರ್ಪಡೆಗೊಳ್ಳುತ್ತಿಲ್ಲ ಎಂದು ಹೇಳಿದ್ದಾರೆ. ನಾನು ಯಾವುದೇ ಪಂಥ, ಬ್ರ್ಯಾಂಡ್'ಗೆ ಸೇರಿದವನಲ್ಲ. ಪ್ರಚಾರಕ್ಕಾಗಿ ನಾನು ಹೇಳಿಕೆಗಳನ್ನು ನೀಡುವುದಿಲ್ಲ. ಯಾವುದೇ ಪಕ್ಷದ ಮಲೆ ನನಗೆ ನಂಬಿಕೆ ಇಲ್ಲ ಎಂದಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಪ್ರಕಾಶ್ ರಾಜ್ ಅವರು ಟೀಕಿಸಿದ್ದರು. ಇದಕ್ಕೆ ಬಿಜೆಪಿ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


