ಶಿವಣ್ಣ-ಶ್ರೀಮುರಳಿ ಅಭಿನಯದ ಮಫ್ತಿ ಚಿತ್ರದೊಂದಿಗೆ ಬೃಹಸ್ಪತಿ ಟ್ರೈಲರ್ ಬಿಡುಗಡೆ
ಸಾಹೇಬ ಚಿತ್ರದ ಮೂಲಕ ಸ್ಯಾಂಡಲ್ವುಡ್ ಗೆ ಪಾದಾರ್ಪಣೆ ಮಾಡಿದ್ದ ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನೋರಂಜನ್ ಇದೀಗ ತಮ್ಮ ಎರಡನೇ ಚಿತ್ರದ ಬಿಡುಗಡೆಯನ್ನು ಎದುರು ನೋಡುತ್ತಿದ್ದಾರೆ...

Published On :
ಸಾಹೇಬ ಚಿತ್ರದ ಮೂಲಕ ಸ್ಯಾಂಡಲ್ವುಡ್ ಗೆ ಪಾದಾರ್ಪಣೆ ಮಾಡಿದ್ದ ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನೋರಂಜನ್ ಇದೀಗ ತಮ್ಮ ಎರಡನೇ ಚಿತ್ರದ ಬಿಡುಗಡೆಯನ್ನು ಎದುರು ನೋಡುತ್ತಿದ್ದಾರೆ.
ನಂದಕಿಶೋರ್ ನಿರ್ದೇಶನದ ಬೃಹಸ್ಪತಿ ಚಿತ್ರದಲ್ಲಿ ಮನೋರಂಜನ್ ಅಭಿನಯಿಸಿದ್ದು ಡಿಸೆಂಬರ್ 1ರಂದು ಬೃಹಸ್ಪತಿ ಚಿತ್ರದ ಟ್ರೈಲರ್ ಹಾಗೂ ಟೀಸರ್ ಬಿಡುಗಡೆ ಮಾಡಲು ನಿರ್ದೇಶಕರು ನಿರ್ಧರಿಸಿದ್ದಾರೆ. ಸ್ಯಾಂಡಲ್ವುಡ್ ನ ಬಹುನಿರೀಕ್ಷಿತ ಮಫ್ತಿ ಚಿತ್ರ ಡಿಸೆಂಬರ್ 1ರಂದು ಬಿಡುಗಡೆಯಾಗುತ್ತಿದೆ. ಅದರ ಜತೆಗೆ ಹೊಂದಿಕೊಂಡು ಬೃಹಸ್ಪತಿ ಟ್ರೈಲರ್ ಮೂಡಿಬರಲಿದೆ.
ಮಫ್ತಿ ಚಿತ್ರದ ಮಧ್ಯಂತರದಲ್ಲಿ ಬೃಹಸ್ಪತಿ ಚಿತ್ರದ ಟ್ರೈಲರ್ ಬಿಡುಗಡೆಯಾದರೆ. ಸಾಮಾಜಿಕ ಜಾಲತಾಣಗಳಲ್ಲಿ ಬೃಹಸ್ಪತಿ ಟೀಸರ್ ಬಿಡುಗಡೆಯಾಗಲಿದೆ. ಚಿತ್ರಕ್ಕೆ ರಾಕ್ ಲೈನ್ ವೆಂಕಟೇಶ್ ಬಂಡವಾಳ ಹೂಡಿದ್ದು ಬಾಲಿವುಡ್ ನಟಿ ಮಿಶ್ಚಿ ಚಕ್ರವರ್ತಿ ನಾಯಕಿಯಾದರೆ, ಸಿತಾರ, ಅವಿನಾಶ್, ಸಾಧು ಕೋಕಿಲಾ ಸಹ ಚಿತ್ರದಲ್ಲಿ ಅಭಿನಯಿಸಿದ್ದಾರೆ. ವಿ ಹರಿಕೃಷ್ಣ ಸಂಗೀತ ಸಂಯೋಜಿಸಿದ್ದು ಸತ್ಯ ಹೆಗ್ಡೆ ಅವರ ಛಾಯಾಗ್ರಾಹಣವಿದೆ.
ಬೃಹಸ್ಪತಿ ಚಿತ್ರ ತಮಿಳಿನ ಸೂಪರ್ ಹಿಟ್ ಚಿತ್ರ ವಿಐಪಿ(ವೃತ್ತಿ ಇಲ್ಲದ ಪದವೀಧರ) ಸಿನಿಮಾದ ರಿಮೇಕ್ ಆಗಿದ್ದು ಮೂಲ ಚಿತ್ರದಲ್ಲಿ ಧನುಷ್ ಮಾಡಿದ್ದ ಪಾತ್ರದಲ್ಲಿ ಮನೋರಂಜನ್ ಅಭಿನಯಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


