ಸಿನಿಮಾ ಸುದ್ದಿ

ಕಿರುಕುಳಕ್ಕೆ ಬೇಸತ್ತು ತಮಿಳು ಚಿತ್ರ ನಿರ್ಮಾಪಕ, ನಿರ್ದೇಶಕ ಬಿ ಅಶೋಕ್ ಕುಮಾರ್ ಆತ್ಮಹತ್ಯೆ

ಸಾಲ ನೀಡಿದಾತನಿಂದ ಕಿರುಕುಳ ತಾಳಲಾರದೇ ತಮಿಳಿನ ಚಿತ್ರ ನಿರ್ಮಾಪಕ ಹಾಗೂ ನಿರ್ದೇಶಕ ಬಿ ಅಶೋಕ್ ಕುಮಾರ್ ಮಂಗಳವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಕಿರುಕುಳಕ್ಕೆ ಬೇಸತ್ತು ತಮಿಳು ಚಿತ್ರ ನಿರ್ಮಾಪಕ, ನಿರ್ದೇಶಕ ಬಿ ಅಶೋಕ್ ಕುಮಾರ್ ಆತ್ಮಹತ್ಯೆ
ಚಿತ್ರ ನಿರ್ಮಾಪಕ, ನಿರ್ದೇಶಕ ಬಿ ಅಶೋಕ್ ಕುಮಾರ್ (ಸಂಗ್ರಹ ಚಿತ್ರ)
Published On :
ಚೆನ್ನೈ: ಸಾಲ ನೀಡಿದಾತನಿಂದ ಕಿರುಕುಳ ತಾಳಲಾರದೇ ತಮಿಳಿನ ಚಿತ್ರ ನಿರ್ಮಾಪಕ ಹಾಗೂ ನಿರ್ದೇಶಕ ಬಿ ಅಶೋಕ್ ಕುಮಾರ್ ಮಂಗಳವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಚೆನ್ನೈನ ಅಳ್ವಾರ್ ತಿರುನಗರ್ ನಿವಾಸದಲ್ಲಿ ಅಶೋಕ್ ಕುಮಾರ್ ಅವರ ಮೃತ ದೇಹ ಪತ್ತೆಯಾಗಿದ್ದು, ಒಂದು ಡೆತ್ ನೋಟ್ ಕೂಡ ಪತ್ತೆಯಾಗಿದೆ. ಡೆತ್ ನೋಟ್ ನಲ್ಲಿ ತಮ್ಮ ಸಾವಿಗೆ ಸಾಲಗಾರರ ಕಿರುಕುಳವೇ ಕಾರಣ ಎಂದು  ಅಶೋಕ್ ಕುಮಾರ್ ಹೇಳಿಕೊಂಡಿದ್ದಾರೆ. ತಮ್ಮ 7 ವರ್ಷಗಳ ಸ್ನೇಹಿತ ಹಾಗೂ ಮಧುರೈ ಮೂಲದ ಓರ್ವ ಫೈನಾನ್ಶಿಯರ್ ರಿಂದ ಅಶೋಕ್ ಸಾಲ ಪಡೆದಿದ್ದರಂತೆ. ಆದರೆ ಇತ್ತೀಚೆಗೆ ಸಾಲ ವಾಪಸ್ ಮಾಡುವಂತೆ  ಸಾಲ  ನೀಡಿದ್ದಾತ ಕಿರುಕುಳ ನೀಡುತ್ತಿದ್ದ. ಆತನ ಕಿರುಕುಳ ತಾಳಲಾರದೇ ಆತ್ಮಹತ್ಯೆಗೆ ಶರಣಾಗುತ್ತಿದ್ದೇನೆ ಎಂದು ಅಶೋತ್ ಕುಮಾರ್ ಡೆತ್ ನೋಟ್ ನಲ್ಲಿ ಬರೆದಿದ್ದಾರೆ.
ಪ್ರಸ್ತುತ ಅಶೋಕ್ ಕುಮಾರ್ ಅವರ ಮೃತದದೇಹವನ್ನು ರೋಯಪೇಟ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆತ್ಮಹತ್ಯೆ ಪ್ರಚೋದನೆ ನೀಡಿದ  ಆರೋಪದ ಮೇರೆಗೆ ಮಧುರೈ ಮೂಲದ ಫೈನಾನ್ಶಿಯರ್ ವಿರುದ್ಧ ಐಪಿಸಿ ಸೆಕ್ಷನ್ 306ರ ಅಡಿಯಲ್ಲಿ ಪೊಲೀಸರು ದೂರು ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಮೃತ ಅಶೋಕ್ ಕುಮಾರ್ ನಟ ನಿರ್ದೇಶಕ ಶಶಿಕುಮಾರ್ ಅವರ ಸಂಬಂಧಿಯಾಗಿದ್ದು, ಅವರ ಪೊರಾಲಿ ಮತ್ತು ಕೋಡಿ ವೀರನ್ ಚಿತ್ರಗಳು ಇನ್ನಷ್ಟೇ ಬಿಡುಗಡೆಯಾಗಬೇಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.