ಸಿನಿಮಾ ಸುದ್ದಿ

ಸ್ಯಾಂಡಲ್‌ವುಡ್‌ನ ಇಬ್ಬರು ಸ್ಟಾರ್ ನಟರ ಚಿತ್ರಗಳಿಗೆ ಒಂದೇ ದಿನ ಮೂಹೂರ್ತ

ಸ್ಯಾಂಡಲ್‌ವುಡ್‌ನ ಇಬ್ಬರು ಸ್ಟಾರ್ ನಟರ ಚಿತ್ರಗಳು ಒಂದೇ ದಿನ ಸೆಟ್ಟೇರುತ್ತಿದೆ. ನವೆಂಬರ್ 23ರಂದು ಸ್ಟಾರ್ ನಟರಾದ ಅಂಬರೀಶ್ ಹಾಗೂ ಶಿವರಾಜ್ ಕುಮಾರ್ ಅಭಿನಯದ...

ಸ್ಯಾಂಡಲ್‌ವುಡ್‌ನ ಇಬ್ಬರು ಸ್ಟಾರ್ ನಟರ ಚಿತ್ರಗಳಿಗೆ ಒಂದೇ ದಿನ ಮೂಹೂರ್ತ
ಅಂಬರೀಶ್, ಶಿವರಾಜ್ ಕುಮಾರ್
Published On :
ಸ್ಯಾಂಡಲ್‌ವುಡ್‌ನ ಇಬ್ಬರು ಸ್ಟಾರ್ ನಟರ ಚಿತ್ರಗಳು ಒಂದೇ ದಿನ ಸೆಟ್ಟೇರುತ್ತಿದೆ. ನವೆಂಬರ್ 23ರಂದು ಸ್ಟಾರ್ ನಟರಾದ ಅಂಬರೀಶ್ ಹಾಗೂ ಶಿವರಾಜ್ ಕುಮಾರ್ ಅಭಿನಯದ ಚಿತ್ರಗಳಿಗೆ ಮುಹೂರ್ತ ನೆರವೇರಲಿದೆ. 
ಹಲವು ವರ್ಷಗಳಿಂದ ಚಿತ್ರರಂಗದಿಂದ ದೂರ ಉಳಿದಿದ್ದ ರೆಬಲ್ ಸ್ಟಾರ್ ಅಂಬರೀಶ್ ಇದೀಗ ಅಂಬಿ ನಿಂಗೆ ವಯಸ್ಸಾಯ್ತು ಚಿತ್ರದ ಮೂಲಕ ಕಮ್ ಬ್ಯಾಕ್ ಮಾಡುತ್ತಿದ್ದಾರೆ. ಇನ್ನು ಶಿವರಾಜ್ ಕುಮಾರ್ ಅವರ ಕವಚ ಚಿತ್ರ ಒಂದೇ ದಿನ ಮೂಹೂರ್ತ ನೆರವೇರಿಸಿಕೊಳ್ಳಲಿವೆ. 
ಅಂಬಿ ನಿಂಗೆ ವಯಸ್ಸಾಯ್ತು ಚಿತ್ರ ತಮಿಳಿನ ಪವರ್ ಪಾಂಡಿ ಚಿತ್ರದ ರಿಮೇಕ್ ಚಿತ್ರವಾಗಿದ್ದು ಚಿತ್ರವನ್ನು ಗುರುದತ್ತಾ ಗಾಣಿಗಿ ನಿರ್ದೇಶಿಸುತ್ತಿದ್ದಾರೆ. ಈ ಚಿತ್ರ ಸುದೀಪ್ ರ ಕಿಚ್ಚಾ ಕ್ರಿಯೆಷನ್ ಬ್ಯಾನರ್ ಅಡಿ ನಿರ್ಮಾಣವಾಗುತ್ತಿದ್ದು ಚಿತ್ರಕ್ಕೆ ಜಾಕ್ ಮಂಜು ಬಂಡವಾಳ ಹೂಡುತ್ತಿದ್ದಾರೆ. 
ಮಲಯಾಳಂನ ಸೂಪರ್ ಹಿಟ್ ಚಿತ್ರ ಒಪ್ಪಂ ಚಿತ್ರದ ಕನ್ನಡದ ರಿಮೇಕ್ ಕವಚ ಚಿತ್ರದಲ್ಲಿ ಶಿವರಾಜ್ ಕುಮಾರ್ ಅಭಿನಯಿಸುತ್ತಿದ್ದಾರೆ. ಈ ಚಿತ್ರವನ್ನು ಜಿವಿಆರ್ ವಾಸು ನಿರ್ದೇಶಿಸುತ್ತಿದ್ದು ಸಂಪತ್ ಕುಮಾರ್ ಮತ್ತು ಎಂವಿವಿ ಸತ್ಯನಾರಾಯಣ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.