ಸಿನಿಮಾ ಸುದ್ದಿ

ಚಿತ್ರೋದ್ಯಮಕ್ಕೆ ರಕ್ಷಣೆ ನೀಡಲು ಸರ್ಕಾರ ದೃಢ ನಿರ್ಧಾರ ತೆಗೆದುಕೊಳ್ಳಲಿ: ಪ್ರಕಾಶ್ ರೈ

ಚಿತ್ರೋದ್ಯಮಕ್ಕೆ ರಕ್ಷಣೆ ನೀಡುವ ಸಂಬಂಧ ಗಟ್ಟಿ ನಿರ್ಧಾರ ತೆಗೆದುಕೊಳ್ಳಬೇಕೆಂದು ದಕ್ಷಿಣ ...

ಚಿತ್ರೋದ್ಯಮಕ್ಕೆ ರಕ್ಷಣೆ ನೀಡಲು ಸರ್ಕಾರ ದೃಢ ನಿರ್ಧಾರ ತೆಗೆದುಕೊಳ್ಳಲಿ: ಪ್ರಕಾಶ್ ರೈ
ಪ್ರಕಾಶ್ ರೈ
Published On :
ಕೊಯಂಬತ್ತೂರು: ಚಿತ್ರೋದ್ಯಮಕ್ಕೆ ರಕ್ಷಣೆ ನೀಡುವ ಸಂಬಂಧ ಗಟ್ಟಿ ನಿರ್ಧಾರ ತೆಗೆದುಕೊಳ್ಳಬೇಕೆಂದು ದಕ್ಷಿಣ ಭಾರತದ ಖ್ಯಾತ ನಟ ಪ್ರಕಾಶ್ ರೈ ಸರ್ಕಾರವನ್ನು ಮನವಿ ಮಾಡಿದ್ದಾರೆ. 
ಇತ್ತೀಚೆಗೆ ತಮಿಳು ಚಿತ್ರರಂಗದ ನಿರ್ಮಾಪಕ ಅಶೋಕ್ ಕುಮಾರ್ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಚಿತ್ರೋದ್ಯಮದ ವಾಸ್ತವ ಸಂಗತಿಯನ್ನು ಮನದಟ್ಟು ಮಾಡುತ್ತದೆ. ಚಿತ್ರರಂಗದಿಂದ ಸರ್ಕಾರಕ್ಕೆ ತೆರಿಗೆ ಹೋಗುತ್ತಿದ್ದರೂ ಕೂಡ ಸರ್ಕಾರ ಚಿತ್ರರಂಗದ ಬಗ್ಗೆ ದೃಢ ನಿರ್ಧಾರ ತೆಗೆದುಕೊಂಡಿಲ್ಲ. ಇಲ್ಲಿ ಕಲಾವಿದರಿಗೆ, ತಂತ್ರಜ್ಞರಿಗೆ ರಕ್ಷಣೆಯಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.
ಕೊಯಂಬತ್ತೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಶೋಕ್ ಕುಮಾರ್ ಅವರ ಆತ್ಮಹತ್ಯೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ. ಆತ್ಮಹತ್ಯೆ ಮಾಡಿಕೊಳ್ಳುವಂತಹ ನಿರ್ಧಾರವನ್ನು ಯಾರೂ ತೆಗೆದುಕೊಳ್ಳಬಾರದು. ಈ ಹಿಂದೆ ಕೂಡ ಇಂತಹ ಆತ್ಮಹತ್ಯೆ ಪ್ರಕರಣಗಳು ನಡೆದಿವೆ. ಆದರೆ ಅದನ್ನು ಯಾರೂ ಗಮನಿಸಲಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.