ಸಿನಿಮಾ ಸುದ್ದಿ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಕ್ಷಿಣ ಭಾರತದ ಖ್ಯಾತ ನಟಿ ನಮಿತಾ

ದಕ್ಷಿಣ ಭಾರತದ ಖ್ಯಾತ ನಟಿ ನಮಿತಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೆಲ ವರ್ಷಗಳಿಂದಲೂ ಪ್ರೀತಿಸುತ್ತಿದ್ದ ನಿರ್ಮಾಪಕ, ನಟ ವೀರೇಂದ್ರ ಚೌಧರಿ ಅವರನ್ನು......

ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಕ್ಷಿಣ ಭಾರತದ ಖ್ಯಾತ ನಟಿ ನಮಿತಾ
ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಕ್ಷಿಣದ ಖ್ಯಾತ ನಟಿ ನಮಿತಾ
Published On :
ತಿರುಪತಿ: ದಕ್ಷಿಣ ಭಾರತದ ಖ್ಯಾತ ನಟಿ ನಮಿತಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೆಲ ವರ್ಷಗಳಿಂದಲೂ ಪ್ರೀತಿಸುತ್ತಿದ್ದ ನಿರ್ಮಾಪಕ, ನಟ ವೀರೇಂದ್ರ ಚೌಧರಿ ಅವರನ್ನು ತಿರುಪತಿಯ ಇಸ್ಕಾನ್ ಮಂದಿರದಲ್ಲಿ ವರಿಸಿದ್ದಾರೆ.
ನಮಿತಾ ಹಾಗೂ ವೀರೇಂದ್ರ ಅವರ ನವಜೋಡಿಯ ಚಿತ್ರಗಳು ಸಾಮಾಜಿಕ ತಾಣದಲ್ಲಿ ವೈರಲ್ ಆಗಿದ್ದು ಇವರ ವಿವಾಹ ಸಮಾರಂಬಕ್ಕೆ ನಟ ಶರತ್ ಕುಮಾರ್ ಹಾಗೂ ನಟಿ ರಾಧಿಕಾ ಆಗಮಿಸಿದ್ದರು.
ದಕ್ಷೀಣ ಭಾರತೀಯ ಚಿತ್ರರಂಗದಲ್ಲಿ ಸುಮಾರು ಹದಿನೈದು ವರ್ಷಗಳಿಂದ ತೊಡಗಿಸಿಕೊಂಡಿರುವ ನಮಿತಾ, ಕನ್ನಡ ಚಿತ್ರರಂಗದ ಕ್ರೇಜಿ ಸ್ಟಾರ್ ರವಿಚಂದ್ರನ್ ಅವರೊಡನೆ ಹಲವು ಚಿತ್ರಗಳಲ್ಲಿ ನಟಿಸಿದ್ದರು. ಇತ್ತೀಚೆಗೆ ಆಕೆ ತಮಿಳು ಬಿಗ್ ಬಾಸ್ ರಿಯಾಲಿಟಿ ಶೋ ನಲ್ಲಿ ಕೂಡ ಪಾಲ್ಗೊಂಡು ಜನಪ್ರಿಯತೆ ಗಳಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.