ಪ್ರಧಾನಿ ಮೋದಿ ವಿರುದ್ಧ ಹೇಳಿಕೆ; ನಟ ಪ್ರಕಾಶ್ ರೈ ವಿರುದ್ಧ ಕೇಸ್ ದಾಖಲು
ಹಿರಿಯ ಪತ್ರಕರ್ತೆ ಹಾಗೂ ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ....

Published On :
ಲಖನೌ: ಹಿರಿಯ ಪತ್ರಕರ್ತೆ ಹಾಗೂ ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದ್ದ ಖ್ಯಾತ ನಟ ಪ್ರಕಾಶ್ ರೈ ಅವರ ವಿರುದ್ಧ ಬುಧವಾರ ಲಖನೌ ಕೋರ್ಟ್ ನಲ್ಲಿ ಕೇಸ್ ದಾಖಲಿಸಲಾಗಿದೆ.
ಪ್ರಧಾನಿ ಮೋದಿ ಅವರು ನನಗಿಂತ ದೊಡ್ಡ ನಟ ಎಂದು ವ್ಯಂಗ್ಯವಾಡಿದ್ದ ಪ್ರಕಾಶ್ ರೈ ವಿರುದ್ಧ ಕೇಸ್ ದಾಖಲಿಸಲಾಗಿದ್ದು, ಅಕ್ಟೋಬರ್ 7ರಂದು ಪ್ರಕರಣದ ವಿಚಾರಣೆ ನಡೆಯಲಿದೆ.
‘ಗೌರಿ ಲಂಕೇಶ್ ಹತ್ಯೆಯನ್ನು ಸಂಭ್ರಮಿಸಿ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ. ಅವರ ಒಳಗೆ ಅಡಗಿರುವ ಕ್ರೌರ್ಯ ಏನೆಂಬುದು ಇದರಿಂದ ಗೊತ್ತಾಗುತ್ತದೆ. ಈ ವಿಷಯದಲ್ಲಿ ಪ್ರಧಾನಿ ಮೋದಿ ಮೌನವಹಿಸಿದ್ದಾರೆ. ಅವರು ನನಗಿಂತಲೂ ದೊಡ್ಡ ನಟ, ನನಗೆ ಬಂದಿರುವ ಪ್ರಶಸ್ತಿಗಳನ್ನು ಅವರಿಗೇ ನೀಡಬೇಕು’ಎಂದು ಪ್ರಕಾಶ್ ರೈ ವ್ಯಂಗ್ಯವಾಡಿದ್ದರು.
ಇನ್ನು ಗೌರಿ ಲಂಕೇಶ್ ಹತ್ಯೆ ಖಂಡಿಸಿ ತಮ್ಮ ರಾಷ್ಟ್ರ ಪ್ರಶಸ್ತಿಗಳನ್ನು ವಾಪಸ್ ಮಾಡುತ್ತಾರೆ ಎಂಬ ಸುದ್ದಿಯ ಬಗ್ಗೆ ಸ್ಪಷ್ಟನೆ ನೀಡಿರುವ ಪ್ರಕಾಶ್ ರೈ, ತಮಗೆ ಬಂದಿರುವ ರಾಷ್ಟ್ರ ಪ್ರಶಸ್ತಿಗಳನ್ನು ವಾಪಸ್ ಮಾಡುವಂತ ಮೂರ್ಖ ನಾನಲ್ಲ, ನನ್ನ ಕೆಲಸಕ್ಕೆ ಸಿಕ್ಕಿರುವ ಪ್ರತಿಫಲ, ಪ್ರಶಸ್ತಿ ಬಗ್ಗೆ ನನಗೆ ಹೆಮ್ಮೆಯಿದೆ ಎಂದು ಸ್ಪಷ್ಟನೆ ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


