ಹಲ್ಲೆ ಆರೋಪ: ಗಾಯಕ ಜುಬೀನ್ ಗಾರ್ಗ್ ಗೆ 3 ತಿಂಗಳ ಜೈಲು ಶಿಕ್ಷೆ
ಪ್ರಸಿದ್ಧ ಅಸ್ಸಾಮಿ ಹಾಗೂ ಬಾಲಿವುಡ್ ಗಾಯಕ ಜುಬೀನ್ ಗಾರ್ಗ್ ಅವರಿಗೆ ಹಲ್ಲೆ ಪ್ರಕರಣದಲ್ಲಿ 3 ತಿಂಗಳ ಜೈಲು ಶಿಕ್ಷೆ ಮತ್ತು 5 ಸಾವಿರ ದಂಡ...

Published On :
ಗುವಾಹಟಿ: ಪ್ರಸಿದ್ಧ ಅಸ್ಸಾಮಿ ಹಾಗೂ ಬಾಲಿವುಡ್ ಗಾಯಕ ಜುಬೀನ್ ಗಾರ್ಗ್ ಅವರಿಗೆ ಹಲ್ಲೆ ಪ್ರಕರಣದಲ್ಲಿ 3 ತಿಂಗಳ ಜೈಲು ಶಿಕ್ಷೆ ಮತ್ತು 5 ಸಾವಿರ ದಂಡ ವಿಧಿಸಲಾಗಿದೆ.
ಗ್ಯಾಂಗ್ ಸ್ಟರ್ ಖ್ಯಾತಿಯ ಗಾಯಕನನ್ನು 2013 ರಲ್ಲಿ ಬಂಧಿಸಲಾಗಿತ್ತು. ವಕೀಲರ ಪುತ್ರನೊಬ್ಬನಿಗೆ ಕಪಾಳ ಮೋಕ್ಷ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿಸಲಾಗಿತ್ತು. ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡುವ ಸಂಬಂಧ ಕಪಾಳ ಮೋಕ್ಷ ಮಾಡಲಾಗಿತ್ತು.
ಐಪಿಸಿ ಸೆಕ್ಷನ್ 323, 342, ಮತ್ತು 506 ಗಳಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಸೆಕ್ಷನ್ 341 ಅಡಿಯಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 3 ತಿಂಗಳ ಜೈಲು ಶಿಕ್ಷೆ ಮತ್ತು 5 ಸಾವಿರ ರು ದಂಡ ವಿಧಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


