ಸಿನಿಮಾ ಸುದ್ದಿ

ರಾಣಾ ಸಿನಿಮಾದಲ್ಲಿ ಮೊದಲ ಬಾರಿಗೆ ಪೊಲೀಸ್ ಅಧಿಕಾರಿಯಾಗಿ ರಾಕಿಂಗ್ ಸ್ಟಾರ್!

ರಾಕಿಂಗ್ ಸ್ಟಾರ್ ಯಶ್ ಮತ್ತೊಮ್ಮೆ ತಮ್ಮ ಮಾಸ್ ಅಪೀಲ್ ಲುಕ್ ತೋರಿಸಲು ಸಿದ್ದರಾಗಿದ್ದಾರೆ. ಸದ್ಯ ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್...

ರಾಣಾ ಸಿನಿಮಾದಲ್ಲಿ ಮೊದಲ ಬಾರಿಗೆ ಪೊಲೀಸ್ ಅಧಿಕಾರಿಯಾಗಿ ರಾಕಿಂಗ್ ಸ್ಟಾರ್!
ಯಶ್
Published On :
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಮತ್ತೊಮ್ಮೆ ತಮ್ಮ ಮಾಸ್ ಅಪೀಲ್ ಲುಕ್ ತೋರಿಸಲು ಸಿದ್ದರಾಗಿದ್ದಾರೆ. ಸದ್ಯ ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ ಸಿನಿಮಾದಲ್ಲಿ ಬ್ಯುಸಿಯಾಗಿರುವ ಯಶ್ ಹರ್ ನಿರ್ದೇಶನದ ಮುಂದಿನ ಸಿನಿಮಾದಲ್ಲಿ ಇಂಟರೆಸ್ಟಿಂಗ್ ಪಾತ್ರ ನಿರ್ವಹಿಸಲಿದ್ದಾರೆ.
ರಾಣಾ ಸಿನಿಮಾದಲ್ಲಿ ಮೊದಲ ಬಾರಿಗೆ ಯಶ್ ಪೊಲೀಸ್ ಪಾತ್ರದಲ್ಲಿ ನಟಿಸಲಿದ್ದಾರೆ. ಇದೇ ಮೊದಲ ಬಾರಿಗೆ ಕಥೆಯ ಬಗ್ಗೆ ವಿವರಣೆ ಕೇಳದೇ ಯಶ್ ಚಿತ್ರದಲ್ಲಿ ನಟಿಸಲು ಒಪ್ಪಿಕೊಂಡಿದ್ದಾರೆ. ಯಶ್ ಅವರ ಮತ್ತೊಂದು ಆಸಕ್ತಿದಾಯಕ ಪಾತ್ರ ನೋಡುವ ಅದೃಷ್ಟ ಪ್ರೇಕ್ಷಕರದ್ದು. ಸಿನಿಮಾ ಸೆಟ್ಟೇರಿದ ನಂತರ ಎಲ್ಲಾ ಮಾಹಿತಿಗಳು ಬಹಿರಂಗಗೊಳ್ಳಲಿವೆ. 
5 ಭಾಷೆಗಳಲ್ಲಿ ತಯಾರಾಗುತ್ತಿರುವ ಕೆಜಿಎಫ್ ಸಿನಿಮಾ ಬಗ್ಗೆ ಯಶ್  ಹೆಚ್ಚಿನ ಗಮನ ಹರಿಸಿದ್ದಾರೆ. ದೊಡ್ಡ ಪ್ರಮಾಣದಲ್ಲಿ ಚಿತ್ರದ ಶೂಟಿಂಗ್ ನಡೆಯುತ್ತಿದೆ.ಹೀಗಾಗಿ ನಿರೀಕ್ಷೆಗಿಂತಲೂ ಹೆಚ್ಚಿನ ಸಮಯ ಹಿಡಿಯುತ್ತಿದೆ. ಯಶ್  ಈ ಸಿನಿಮಾಗಾಗಿ ಯಾವುದೇ ಗಡುವು ವಿಧಿಸಿಲ್ಲ. ಕೆಜಿಎಫ್ ನಂತರವಷ್ಟೇ  ಹರ್ಷ ಅಲರ ರಾಣಾ ಸಿನಿಮಾ ಸೆಟ್ಟೇರಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.