ಬಾಲಿವುಡ್ ಶಹನ್ ಷಾ ಗೆ ಜನ್ಮದಿನ ಶುಭಾಶಯ ಕೋರಿದ ಪ್ರಧಾನಿ ಮೋದಿ
ಭಾರತದ ಪ್ರಧಾನಿ ನರೇಂದ್ರ ಮೋದಿ, ಬಾಲಿವುಡ್ ನ ಬಾದ್ ಷಾ ಬಿಗ್ ಬಿ ಅಮಿತಾಭ್ ಬಚ್ಚನ್ ಅವರ ಹುಟ್ಟು ಹಬ್ಬಕ್ಕೆ ಶುಭ ಹಾರೈಸಿದ್ದಾರೆ.

Published On :
ನವದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿ, ಬಾಲಿವುಡ್ ನ ಬಾದ್ ಷಾ ಬಿಗ್ ಬಿ ಅಮಿತಾಭ್ ಬಚ್ಚನ್ ಅವರ ಹುಟ್ಟು ಹಬ್ಬಕ್ಕೆ ಶುಭ ಹಾರೈಸಿದ್ದಾರೆ.
ಅ.11, 1942 ರಂದು ಹರಿವಂಶ್ ರಾಯ್ ಬಚ್ಚನ್ ಮತ್ತು ತೇಜಿ ಬಚ್ಚನ್ ದಂಪತಿಗೆ ಜನಿಸಿದ ಬಾಲಿವುಡ್ ನ ಶೆಹನ್ ಷಾ ಗೆ ಇಂದು 75 ವರ್ಷ.
"ಜನುಮದಿನದ ಶುಭಾಶಯ@SrBachchan! ಅವರ ಸಿನಿಮೀಯ ಪ್ರತಿಭೆ ಮತ್ತು ಸಾಮಾಜಿಕ ಕಾರ್ಯಗಳಿಗೆ ಅವರ ಬೆಂಬಲದ ಬಗ್ಗೆ ಭಾರತ ಹೆಮ್ಮೆ ಪಡುತ್ತದೆ, ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ನಾನು ಪ್ರಾರ್ಥಿಸುತ್ತೇನೆ." ಎಂದು ಪ್ರಧಾನಿ ಮೋದಿ ಇಂದು ಟ್ವೀಟ್ ಮಾಡಿದ್ದಾರೆ.
1970 ರ ದಶಕದ 'ಜಂಜೀರ್' ಮತ್ತು 'ದೀವಾರ್' ಚಿತ್ರಗಳಲ್ಲಿ ಅವರ 'ಆಂಗ್ರಿ ಯಂಗ್ ಮ್ಯಾನ್' ಪಾತ್ರಕ್ಕಾಗಿ ಜನಪ್ರಿಯತೆಯ ಉತ್ತುಂಗಕ್ಕೇರಿದ್ದರು.
ಬಿಗ್ ಬಿ ತನ್ನ ವೃತ್ತಿಜೀವನದಲ್ಲಿ ಹಲವಾರು ಪ್ರಶಸ್ತಿಗಳನ್ನು ಗೆದ್ದಿದ್ದಾರೆ, ಇದರಲ್ಲಿ ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಹದಿನೈದು ಫಿಲ್ಮ್ ಫೇರ್ ಪ್ರಶಸ್ತಿಗಳು ಸೇರಿದೆ. ಅಲ್ಲದೆ ಅಂತರಾಷ್ಟ್ರೀಯ ಚಲನಚಿತ್ರೋತ್ಸವಗಳು ಮತ್ತು ಪ್ರಶಸ್ತಿ ಸಮಾರಂಭಗಳಲ್ಲಿ ಅನೇಕ ಪ್ರಶಸ್ತಿಗಳು ಇವರಿಗೆ ಒಲಿದು ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Amitabh Bachchanಪ್ರಧಾನ ಮಂತ್ರಿ ನರೇಂದ್ರ ಮೋದಿBollywoodಬಾಲಿವುಡ್Prime Minister Narendra Modiಅಮಿತಾಭ್ ಬಚ್ಚನ್ಬHarivansh Rai Bachchanಹರಿವಂಶ್ ರಾಯ್ ಬಚ್ಚನ್Bollywood Shahensha
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


