ಸರಳವಾಗಿ ನೆರವೇರಿದ ಚಿರಂಜೀವಿ ಸರ್ಜಾ-ಮೇಘನಾ ರಾಜ್ ನಿಶ್ಚಿತಾರ್ಥ
ಸ್ಯಾಂದಲ್ ವುಡ್ ನಟ ಚಿರಂಜೀವಿ ಸರ್ಜಾ ಹಾಗೂ ನಟಿ ಮೇಘನಾ ರಾಜ್ ನಿಶ್ಚಿತಾರ್ಥ ಇಂದು ನೆರವೇರಿದೆ.

Published On :
ಬೆಂಗಳೂರು: ಸ್ಯಾಂದಲ್ ವುಡ್ ನಟ ಚಿರಂಜೀವಿ ಸರ್ಜಾ ಹಾಗೂ ನಟಿ ಮೇಘನಾ ರಾಜ್ ನಿಶ್ಚಿತಾರ್ಥ ಇಂದು ನೆರವೇರಿದೆ.
ಬೆಂಗಳೂರಿನ ಜೆ.ಪಿ.ನಗರದ ಮೇಘನಾ ರಾಜ್ ನಿವಾಸದಲ್ಲಿ ನಿಶ್ಚಿತಾರ್ಥ ಕಾರ್ಯಕ್ರಮವನ್ನು ಸರಲವಾಗಿ ನೆರವೇರಿಸಲಾಯಿತು.
ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಚಿರಂಜೀವಿ ಸರ್ಜಾ ಹಾಗೂ ಮೇಘನಾ ಕುಟುಂಬಸ್ಥರು ಭಾಗಿಯಾಗಿದ್ದರು. ನಟ ಅರ್ಜುನ್ ಸರ್ಜಾ ಪತ್ನಿ ಆಶಾ ರಾಣಿ ಹಾಗೂ ಪುತ್ರಿ ಐಶ್ವರ್ಯ ಅರ್ಜುನ್, ಜೊತೆಗೆ ಚಿರಂಜೀವಿ ಸರ್ಜಾ ಸಹೋದರ ಧ್ರುವ ಸರ್ಜಾ ಹಾಗೂ ಸುಂದರ್ ರಾಜ್ ದಂಪತಿ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸಾಂಪ್ರದಾಯಿಕ ಶೈಲಿಯಲ್ಲಿ ನದೆದ ಕಾರ್ಯಕ್ರಮದಲ್ಲಿ ತಾಂಬೂಲ ಬದಲಾವಣೆ, ಸೀರೆ ನೀಡುವ ಶಾಸ್ತ್ರ ನೆರವೇರಿದವು. ಕೆಂಪು ಬಣ್ಣದ ಸೀರೆ ಉಟ್ಟಿದ್ದ ಮೇಘನಾ ಜತೆ ಬಿಳಿ ಬಣ್ಣದ ಅಂಗಿ ತೊಟ್ಟ ಚಿರು ಜೋಡಿ ಅದ್ಭುತವಾಗಿ ಕಾಣುತ್ತಿತ್ತು. ಇಂದು ಸಂಜೆ ಏಳಕ್ಕೆ ಬೆಂಗಳೂರಿನ ಲೀಲಾ ಪ್ಯಾಲೇಸ್ ನಲ್ಲಿ ಅದ್ದೂರಿ ಕಾರ್ಯಕ್ರಮ ನದೆಯಲಿದ್ದು ಕನ್ನಡ ಚಿತ್ರರಂಗದ ಗಣ್ಯರು ಭಾಗವಹಿಸಲಿದ್ದಾರೆ.
ಚಿರಂಜೀವಿ-ಮೇಘನಾ ವಿವಾಹ ಮಹೋತ್ಸವವು ಇದೇ ಡಿ.6 ರಂದು ನಡೆಯಲಿದೆ ಎಂದು ಹೇಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಚಿರಂಜೀವಿ ಸರ್ಜಾChiranjeevi Sarjaಮೇಘನಾ ರಾಜ್Meghna RajMeghna Raj engagementThe Leela Palace Bengaluruಮೇಘನಾ ರಾಜ್ ನಿಶ್ಚಿತಾರ್ಥಲೀಲಾ ಪ್ಯಾಲೇಸ್ ಬೆಂಗಳೂರು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


