ನಟಿ ಐಶ್ವರ್ಯಾ ರೈ ತಾಯಿ ವಾಸವಿದ್ದ ಅಪಾರ್ಟ್ ಮೆಂಟ್ ಗೆ ಬೆಂಕಿ
ಮುಂಬೈನ ಬಾಂದ್ರಾದಲ್ಲಿರುವ ಐಶ್ವರ್ಯಾ ರೈ ಬಚ್ಚನ್ ಅವರ ತಾಯಿ ವಾಸವಾಗಿರುವ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡದಲ್ಲಿ

Published On :
ಮುಂಬಯಿ: ಮುಂಬೈನ ಬಾಂದ್ರಾದಲ್ಲಿರುವ ಐಶ್ವರ್ಯಾ ರೈ ಬಚ್ಚನ್ ಅವರ ತಾಯಿ ವಾಸವಾಗಿರುವ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಟ್ಟದಲ್ಲಿ ದಟ್ಟ ಹೊಗೆ ಬರುತ್ತಿರುವ ವೀಡಿಯೋವನ್ನು ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಸಹ ಲೈವ್‌ನಲ್ಲಿ ಹಂಚಿಕೊಂಡಿದ್ದಾರೆ.
ಬಾಂದ್ರಾದ ಪಶ್ಚಿಮದಲ್ಲಿರುವ ಈ ಕಟ್ಟಡದ 13ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆದರೆ ಈ ಘಟನೆಯಲ್ಲಿ ಯಾವುದೇ ಸಾವುನೋವು ಸಂಭವಿಸದಿದ್ದರೂ ಕ್ಷಣಕಾಲ ಆತಂಕದ ಪರಿಸ್ಥಿತಿ ನಿರ್ಮಾಣವಾಗಿತ್ತು. ಐಶ್ವರ್ಯಾ ರೈ ಹಾಗೂ ಅಭಿಷೇಕ್ ಬಚ್ಚನ್ ಸಹ ತರಾತುರಿಯಲ್ಲಿ ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದರು.
ಇದೇ ವರ್ಷ ಐಶ್ವರ್ಯಾ ರೈ ಅವರ ತಂದೆ ಕೃಷ್ಣರಾಜ್ ರೈ ಅವರು ಅನಾರೋಗ್ಯದಿಂದ ಮೃತಪಟ್ಟಿದ್ದರು. ಇದೀಗ ಅವರ ತಾಯಿ ವಾಸವಾಗಿರುವ ಕಟ್ಟಡಕ್ಕೆ ಬೆಂಕಿ ಬಿದ್ದಿರುವ ಕಾರಣ ಸಹಜವಾಗಿ ಅವರು ಆತಂಕಕ್ಕೆ ಒಳಗಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ApartmentAishwarya Rai Bachchanfireಐಶ್ವರ್ಯಾ ರೈAbhishek Bachchanಅಭಿಷೇಕ್ ಬಚ್ಚನ್ಬೆಂಕಿಅಪಾರ್ಟ್ ಮೆಂಟ್Bandraಬಾಂದ್ರಾ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


