ಕನ್ನಡ ರಾಜ್ಯೋತ್ಸವ: ಪುನೀತ್ ಹಾಡಿದ ಅಣ್ಣಾವ್ರ ಹಾಡು ವೈರಲ್
ಕನ್ನಡದ ಖ್ಯಾತ ನಟ ಡಾ. ರಾಜ್ ಕುಮಾರ್ ಅವರ ಪುತ್ರರಾದ ಪುನೀತ್ ರಾಜ್ ಕುಮಾರ್ ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಹಾಡಿರುವ ಹಾಡಿನ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Published On :
ಬೆಂಗಳೂರು: ಕನ್ನಡದ ಖ್ಯಾತ ನಟ ಡಾ. ರಾಜ್ ಕುಮಾರ್ ಅವರ ಪುತ್ರರಾದ ಪುನೀತ್ ರಾಜ್ ಕುಮಾರ್ ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಹಾಡಿರುವ ಹಾಡಿನ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಡಾ. ರಾಜ್ ಅಭಿನಯದ 'ಚಲಿಸುವ ಮೋಡಗಳು' ಚಿತ್ರದ "ಜೇನಿನ ಹೊಳೆಯೊ ಹಾಲಿನ ಮಳೆಯೊ..." ಹಾಡನ್ನು ಹಾಡಿದ್ದ ಪುನೀತ್ ವೀಡಿಯೋವನ್ನು ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಅಪ್ ಲೋಡ್ ಮಾಡಿದ್ದಾರೆ.
"ಅಪ್ಪಾಜಿ ಹಾಡಿರುವ ಈ ಅದ್ಭುತ ಸಾಲುಗಳು ಕನ್ನಡ ರಾಜ್ಯೋತ್ಸವಕ್ಕೆ ನನ್ನದ್ದೊಂದು ಚಿಕ್ಕ ಉಡುಗೊರೆ! ಜೈ ಕರ್ನಾಟಕ ಮಾತೆ" ಎನ್ನುವ ಸಾಲುಗಳೊಂದಿಗೆ ವೀಡಿಯೋ ಹಾಕಿರುವ ಪುನೀತ್ ರ ಈ ವೀಡಿಯೋವನ್ನು ಇದುವರೆಗೆ 11 ಸಾವಿರಕ್ಕಿಂತಲೂ ಹೆಚ್ಚು ಜನ ಲೈಕ್ ಮಾಡಿದ್ದಾರೆ. 4 ಸಾವಿರಕ್ಕೂ ಹೆಚ್ಚು ಜನ ಶೇರ್ ಮಾಡಿದ್ದಾರೆ.
ಇಂದು ಬೆಳಗ್ಗೆ 9ಕ್ಕೆ ಪುನೀತ್ ಈ ವೀಡಿಯೋವನ್ನು ಫೇಸ್ ಬುಕ್ ಗೆ ಹಾಕಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Facebookಫೇಸ್ ಬುಕ್Puneeth RajkumarDr. RajkumarKannada Rajyotsavaಪುನೀತ್ ರಾಜ್ ಕುಮಾರ್Viral Videoವೈರಲ್ ವಿಡಿಯೋಡಾ. ರಾಜ್ ಕುಮಾರ್ಕನ್ನಡ ರಾಜಯೋತ್ಸವ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


