ಜಗ್ಗೇಶ್ ಹೊಸ ಅವತಾರ: ಮೊಟ್ಟಮೊದಲ ಬಾರಿಗೆ ಕ್ರೈಂ ಥ್ರಿಲ್ಲರ್ ನಲ್ಲಿ ನವರಸ ನಾಯಕ
ತಮ್ಮ ಬಹುಮುಖ ಪ್ರತಿಭೆಯಿಂದ ಹಲವು ದಶಕಗಳಿಂದ ಕನ್ನಡ ಪ್ರೇಕ್ಷಕರನ್ನು ನಗೆ ಗಡಲಲ್ಲಿ ತೇಲಿಸುತ್ತಿರುವ ನವರಸ ನಾಯಕ ಜಗ್ಗೇಶ್ ತಮ್ಮ ಮುಂದಿನ ಸಿನಿಮಾದಲ್ಲಿ ...

Published On :
ಬೆಂಗಳೂರು: ತಮ್ಮ ಬಹುಮುಖ ಪ್ರತಿಭೆಯಿಂದ ಹಲವು ದಶಕಗಳಿಂದ ಕನ್ನಡ ಪ್ರೇಕ್ಷಕರನ್ನು ನಗೆ ಗಡಲಲ್ಲಿ ತೇಲಿಸುತ್ತಿರುವ ನವರಸ ನಾಯಕ ಜಗ್ಗೇಶ್ ತಮ್ಮ ಮುಂದಿನ ಸಿನಿಮಾದಲ್ಲಿ ಕೊಲೆಗಾರನಾಗಿ ಕಾಣಿಸಿಕೊಳ್ಳಲಿದ್ದಾರೆ.
ವೈವಿಧ್ಯಮಯ ಪಾತ್ರಗಳ ಮೂಲಕ ಹೊಸ ಹೊಸ ಪ್ರಯೋಗಗಳನ್ನು ನಡೆಸುವ ಜಗ್ಗೇಶ್ ವಿಭಿನ್ನ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ತಮ್ಮ ವೃತ್ತಿ ಜೀವನದಲ್ಲಿ ಮೊದಲ ಬಾರಿಗೆ ಜಗ್ಗೇಶ್ ನೆಗೆಟಿವ್ ರೋಲ್ ನಲ್ಲಿ ಅಭಿನಯಿಸುತ್ತಿದ್ದಾರೆ.
ಜಾಹೀರಾತು ನಿರ್ಮಾಪಕರೊಬ್ಬರು ಸಿನಿಮಾ ನಿರ್ಮಿಸುತ್ತಿದ್ದು, ಇದುವರೆಗೂ ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ನೀಡಿಲ್ಲ, ಸಿನಿಮಾದ ಮೊದಲ ಟೀಸರ್ ರಿಲೀಸ್ ಆಗುವವರೆಗೂ ಕಾಯಬೇಕಿದೆ.
ಆದರೆ ಸಿನಿಮಾದಲ್ಲಿ ಜಗ್ಗೇಶ್ ಸರಣಿ ಕೊಲೆಗಾರನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದ ಕಥೆ ಕಣ್ಣ ಮುಚ್ಚಾಲೆ ಆಟದಂತಿದ್ದು, ಗುಪ್ತಚರ ಇಲಾಖೆ ಮತ್ತು ಅಪರಾಧದ ನಡುವಿನ ಸ್ಪರ್ಧೆಯಂತಿದೆ.
ಸ್ಯಾಂಡಲ್ ವುಡ್ ನ ಹೊಸ ಟ್ರೆಂಡ್ ನಲ್ಲಿ ಕಾಣಿಸಿಕೊಳ್ಳಲು ಬಯಸಿರುವ ಜಗ್ಗೇಶ್ ಪ್ರೆಶ್ ಸಬ್ಜೆಕ್ಟ್ ಆರಿಸಿಕೊಂಡಿದ್ದಾರೆ. ಸೆಪ್ಟಂಬರ್ 22 ರಂದು ಸಿನಿಮಾ ಮೂಹೂರ್ತ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


