ಸ್ವಚ್ಛತೆ ಬಗ್ಗೆ ಫೇಸ್‌ಬುಕ್‌ನಲ್ಲಿ ಬಾಹುಬಲಿ ಪ್ರಭಾಸ್ ಸ್ಫೂರ್ತಿದಾಯಕ ಸಂದೇಶ: ಅಭಿಮಾನಿಗಳು ಫಿದಾ
ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ನಟ ಪ್ರಭಾಸ್ ಫೇಸ್ ಬುಕ್ ನಲ್ಲಿ ಪೋಸ್ಟ್ ಒಂದನ್ನು ಹಾಕಿದ್ದು, ಅವರ ಅಭಿಮಾನಗಳಲ್ಲಿ ಹೊಸ ಉತ್ಸಾಹ ಮೂಡಿಸಿದೆ. ...

Published On :
ಮುಂಬಯಿ: ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ನಟ ಪ್ರಭಾಸ್ ಫೇಸ್ ಬುಕ್ ನಲ್ಲಿ ಪೋಸ್ಟ್ ಒಂದನ್ನು ಹಾಕಿದ್ದು, ಅವರ ಅಭಿಮಾನಗಳಲ್ಲಿ ಹೊಸ ಉತ್ಸಾಹ ಮೂಡಿಸಿದೆ.
ಮಹಾತ್ಮ ಗಾಂಧೀಜಿಯವರು ದೇಶದ ಸ್ವಚ್ಛತೆಗಾಗಿ ಶ್ರಮಿಸಿದ್ದರು. ಈ ಬಾರಿ ನಡೆಯಲಿರುವ ಸ್ವಚ್ಛ ಭಾರತ್ ಕಾರ್ಯಕ್ರಮದಲ್ಲಿ ನಾನು ಪಾಲ್ಗೊಳ್ಳುತ್ತಿದ್ದೇನೆ. ಕೆಲವೊಮ್ಮೆ ವೈಯಕ್ತಿಕವಾಗಿ ಈ ವಿಷಯದ ಬಗ್ಗೆ ಯೋಚಿಸುತ್ತೇನೆ. ದೇಶದ ನಾಗರಿಕನಾಗಿ ಇದು ನಮ್ಮ ಕರ್ತವ್ಯ ಮಾತ್ರ ಅಲ್ಲ ಇದು ಹವ್ಯಾಸ ಆಗಬೇಕೆಂದು ಅವರು ಹೇಳಿದ್ದಾರೆ.
ಈ ರೀತಿಯ ಯೋಚನೆ ಮಾಡುವ ನಾವೆಲ್ಲ ಸೇರಿಕೊಂಡು ಭಾರತವನ್ನು ಸ್ವಚ್ಛವಾಗಿ ಇಡೋಣ ಹಾಗೂ ನಾವೆಲ್ಲರೂ ಜೊತೆಯಾಗಿದ್ದರೆ ಭಾರತವನ್ನು ಇನ್ನಷ್ಟು ಸುಂದರವಾಗಿಸಬಹುದು ಎಂದು ಪ್ರಭಾಸ್ ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಮಹಾತ್ಮ ಗಾಂಧಿಫೇಸ್ ಬುಕ್ ಪೋಸ್ಟ್ಅಭಿಮಾನಿಗಳುPrabhasಪ್ರಭಾಸ್ಸ್ವಚ್ಛ ಭಾರತ್Mahatma GandhijiSwach BharatFace book post. Fans
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


