ರವಿಚಂದ್ರನ್ ನಿರ್ದೇಶನದ 'ರಾಜೇಂದ್ರ ಪೊನ್ನಪ್ಪ' ಸಿನಿಮಾದಲ್ಲಿ ವಕೀಲೆಯಾಗಿ ಅಪೂರ್ವ
ರವಿಚಂದ್ರನ್ ಅವರ ಅಪೂರ್ವ ಸಿನಿಮಾಗೆ ನಾಯಕಿಯಾಗಿದ್ದ ನಟಿ ಅಪೂರ್ವ ಎರಡು ವರ್ಷಗಳ ನಂತರ ನಟನೆಯತ್ತ ಮುಖ ಮಾಡಿದ್ದಾರೆ....

Published On :
ಬೆಂಗಳೂರು: ರವಿಚಂದ್ರನ್ ಅವರ ಅಪೂರ್ವ ಸಿನಿಮಾಗೆ ನಾಯಕಿಯಾಗಿದ್ದ ನಟಿ ಅಪೂರ್ವ ಎರಡು ವರ್ಷಗಳ ನಂತರ ನಟನೆಯತ್ತ ಮುಖ ಮಾಡಿದ್ದಾರೆ.
ಕ್ರೇಜಿಸ್ಟಾರ್ ರವಿಚಂದ್ರನ್ ನಿರ್ದೇಶನದ ರಾಜೇಂದ್ರ ಪೊನ್ನಪ್ಪ ಸಿನಿಮಾದಲ್ಲಿ ವಕೀಲೆಯಾಗಿ ರವಿಚಂದ್ರನ ಜೊತೆ ಕಾಣಿಸಿಕೊಳ್ಳುತ್ತಿದ್ದಾರೆ, ರಾಧಿಕಾ ಕುಮಾರಸ್ವಾಮಿ ಕೂಡ ಸಿನಿಮಾದಲ್ಲಿ ನಟಿಸಿದ್ದಾರೆ. ಸಿನಿಮಾ ಈಶ್ವರಿ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗುತ್ತಿದೆ.
ಪ್ರಧಾನ ಪಾತ್ರದಲ್ಲಿ ನಟಿಸುತ್ತಿರುವ ರವಿಚಂದ್ರನ್ ಸಂಗೀತ ಸಂಯೋಜನೆ ಕೂಡ ಮಾಡಿದ್ದಾರೆ. ಸದ್ಯ ಸಿನಿಮಾ ಶೂಟಿಂಗ್ ನಡೆಯುತ್ತಿದ್ದು, ಮುಂದಿನ 10 ದಿನಗಳಲ್ಲಿ ಅಪೂರ್ವ ಸಿನಿಮಾ ಸೆಟ್ ಗೆ ಬರಲಿದ್ದಾರೆ.
ಅಪೂರ್ವ ನಂತರ ಯಾವುದೇ ಸಿನಿಮಾಗಳಲ್ಲಿ ನಟಿಸಲು ಅಪೂರ್ವ ಆಸಕ್ತಿ ಹೊಂದಿಲ್ಲ ಎಂಬ ಮಾತುಗಳು ಕೇಳಿ ಬಂದಿದ್ದವು, ಉತ್ತಮ ಪ್ರಾಜೆಕ್ಟ್ ಗಾಗಿ ಕಾಯುತ್ತಿದ್ದ ಆಕೆ ನಟನೆಗೆ ತಯಾರಿ ಮಾಡಿಕೊಳ್ಳುತ್ತಿದ್ದರು, ಆದರೆ ರಾಜೇಂದ್ರ ಪೊನ್ನಪ್ಪ ಸಿನಿಮಾದಲ್ಲಿ ನಟಿಸಲು ಅಪೂರ್ವ ಎರಡನೇ ಮಾತಿಲ್ಲದೇ ಒಪ್ಪಿಕೊಂಡಿದ್ದಾರೆ, ಏಕೆಂದರೇ ರವಿಚಂದ್ರನ್ ಅಪೂರ್ವ ಅವರ ಗಾಡ್ ಫಾದರ್ ಆಗಿರುವ ಕಾರಣ ವಕೀಲೆ ಪಾತ್ರಕ್ಕೆ ಒಪ್ಪಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


