'ಕಾಮಿಡಿ ಕಿಲಾಡಿ' ನಯನಾ ದಾಂಪತ್ಯ ಜೀವನಕ್ಕೆ, ಶರತ್ ಜೊತೆ ಸಪ್ತಪದಿ
ಜೀ ಟಿವಿಯ ಕಾಮಿಡಿ ಕಿಲಾಡಿ ಶೋ ಮೂಲಕ ಜನಪ್ರಿಯಗೊಂಡಿದ್ದ ಕಾಮಿಡಿ ಕಿಲಾಡಿ ನಯನಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ...

Published On :
ಬೆಂಗಳೂರು: ಜೀ ಟಿವಿಯ ಕಾಮಿಡಿ ಕಿಲಾಡಿ ಶೋ ಮೂಲಕ ಜನಪ್ರಿಯಗೊಂಡಿದ್ದ ಕಾಮಿಡಿ ಕಿಲಾಡಿ ನಯನಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ದೂರದ ಸಂಬಂಧಿ ಶರತ್ ಎಂಬುವರ ಜತೆ ನಯನಾ ಧರ್ಮಸ್ಥಳದ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಕುಟುಂಬ ಸದಸ್ಯರು ಮತ್ತು ಆಪ್ತರ ಸಮ್ಮುಖದಲ್ಲಿ ಸಪ್ತಪದಿ ತುಳಿದರು.
ಕಾಮಿಡಿ ಕಿಲಾಡಿಗಳು ಶೋನಲ್ಲಿ ನಯನಾ ರನ್ನರ್ ಅಪ್ ಆಗಿದ್ದರು. ನಯನಾ ಪತಿ ಶರತ್ ಮೂಲತಃ ಬೆಂಗಳೂರಿನ ಉದ್ಯಮಿಯಾಗಿದ್ದಾರೆ.
ಮದುವೆ ಕಾರ್ಯಕ್ರಮದಲ್ಲಿ ಕಾಮಿಡಿ ಕಿಲಾಡಿಗಳು ವಿನ್ನರ್ ಮತ್ತು ನಟ ಶಿವರಾಜ್ ಕೂಡಾ ಭಾಗವಹಿಸಿ ನವ ದಂಪತಿಗಳಿಗೆ ಶುಭಾಶಯ ಕೋರಿದರು. ಇನ್ನು ಮದುವೆಯ ಆರತಕ್ಷತೆ ಕಾರ್ಯಕ್ರಮ ಬೆಂಗಳೂರಿನಲ್ಲಿ ಅದ್ಧೂರಿಯಾಗಿ ನಡೆಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


