ಒಡೆಯರ್ ಟೈಟಲ್ ಗೆ ಅಭ್ಯಂತರವಿಲ್ಲ; ಆದರೆ ರಾಜಮನೆತನದ ಬಗ್ಗೆ ಚಿತ್ರಿಸಬಾರದು: ಪ್ರಮೋದಾ ದೇವಿ
ಒಡೆಯರ್ ಚಿತ್ರದ ಟೈಟಲ್ ಗೆ ನಮ್ಮ ಅಭ್ಯಂತರವೇನು ಇಲ್ಲ ಎಂದು ರಾಜಮಾತೆ ಪ್ರಮೋದಾದೇವಿ ಸ್ಪಷ್ಟಪಡಿಸಿದ್ದಾರೆ,...

Published On :
ಮೈಸೂರು: ಒಡೆಯರ್ ಚಿತ್ರದ ಟೈಟಲ್ ಗೆ ನಮ್ಮ ಅಭ್ಯಂತರವೇನು ಇಲ್ಲ ಎಂದು ರಾಜಮಾತೆ ಪ್ರಮೋದಾದೇವಿ ಒಡೆಯರ್ ಸ್ಪಷ್ಟಪಡಿಸಿದ್ದಾರೆ,
ಮೈಸೂರಿನಲ್ಲಿ ಆಯೋಜಿಸಿದ್ದ ಮುಮ್ಮಡಿ ಕೃಷ್ಣರಾಜ ಒಡೆಯರ್ ಅವರ 225ನೇ ಜನ್ಮದಿನಾಚರಣೆಯಲ್ಲಿ ಪ್ರಮೋದಾ ದೇವಿ ಪಾಲ್ಗೊಂಡಿದ್ದರು. ಈ ವೇಳೆ ಒಡೆಯರ್ ಟೈಟಲ್ ಬಗ್ಗೆ ಪ್ರತ್ರಿಕ್ರಿಯಿಸಿದ ಅವರು, ಸಿನಿಮಾಗೆ ಒಡೆಯರ್ ಎಂದು ಹೆಸರು ಇಡಲು ನಮ್ಮ ಅಭ್ಯಂತರವಿಲ್ಲ. ಆದರೆ, ರಾಜ ಮನೆತನದ ಬಗ್ಗೆ ಏನಾದರೂ ಚಿತ್ರಿಸಿದರೆ ಖಂಡಿತ ಆಕ್ಷೇಪ ವ್ಯಕ್ತಪಡಿಸುತ್ತೇವೆ ಎಂದಿದ್ದಾರೆ.
ಒಡೆಯರ್ ಹೆಸರು ನಮಗೆ ಬಳುವಳಿಯಾಗಿ ಬಂದಿದ್ದರೂ ಅದನ್ನು ತುಂಬ ಜನರು ಇಟ್ಟುಕೊಂಡಿದ್ದಾರೆ. ಹಾಗಾಗಿ ಚಲನಚಿತ್ರಕ್ಕೆ ಆ ಹೆಸರು ಇಡಬಹುದು. ಆದರೆ, ನಮ್ಮ ಮನೆತನಕ್ಕೆ ಸಂಬಂಧಪಟ್ಟಂತೆ ಏನಾದರೂ ಚಿತ್ರಣವಿದ್ದರೆ ಅದನ್ನು ವಿರೋಧಿಸುತ್ತೇವೆ ಎಂದು ಹೇಳಿದ್ದಾರೆ.
ಟೈಟಲ್ ವಿವಾದ ನನ್ನ ಗಮನಕ್ಕೆ ಬಂದ ಮೇಲೆ ನಾನು ಈ ಸಂಬಂಧ ಪ್ರೊಡಕ್ಷನ್ ಹೌಸ್ ಗೆ ಪತ್ರ ಬರೆದಿದ್ದೆ ಅವರ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇನೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


