ಕನ್ನಡಕ್ಕೆ ಮತ್ತೊಬ್ಬ ತಮಿಳು ನಟನ ಪಾದಾರ್ಪಣೆ!
ಪರ ಭಾಷಾ ತಾರಾ ನಟರು ಇದೀಗ ಸ್ಯಾಂಡಲ್ವುಡ್ ನಲ್ಲಿ ತಮ್ಮ ಅದೃಷ್ಟ ಪರೀಕ್ಷೆ ಮಾಡಲು ತುದಿಗಾಲಲ್ಲಿ ನಿಂತಿದ್ದಾರೆ...

Published On :
ಪರ ಭಾಷಾ ತಾರಾ ನಟರು ಇದೀಗ ಸ್ಯಾಂಡಲ್ವುಡ್ ನಲ್ಲಿ ತಮ್ಮ ಅದೃಷ್ಟ ಪರೀಕ್ಷೆ ಮಾಡಲು ತುದಿಗಾಲಲ್ಲಿ ನಿಂತಿದ್ದಾರೆ.
ಹೌದು, ಬಾಯ್ಸ್ ಹಾಗೂ ಕಾದಲ್ ಚಿತ್ರದ ನಟ ಭರತ್ ಇದೀಗ ಅಖಿಲ್ ಚಿತ್ರದ ಮೂಲಕ ಸ್ಯಾಂಡಲ್ವುಡ್ ಗೆ ಪಾದಾರ್ಪಣೆ ಮಾಡುತ್ತಿದ್ದಾರೆ. ಇನ್ನು ಚಿತ್ರದಲ್ಲಿ ಸೂರಜ್ ಕುಮಾರ್ ನಾಯಕನಾಗಿ ಅಭಿನಯಿಸುತ್ತಿದ್ದು ಭರತ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಲಿದ್ದಾರೆ.
ಚಿತ್ರವನ್ನು ಅನೂಪ್ ಆಂಟೋನಿ ಎಂಬುವರು ನಿರ್ದೇಶಿಸುತ್ತಿದ್ದಾರೆ. ಅನೂಪ್ ಅವರದ್ದು ಇದು ಎರಡನೇ ಚಿತ್ರವಾಗಿದ್ದು ಇದಕ್ಕೆ ಮುನ್ನ ಕಥಾ ವಿಚಿತ್ರ ಚಿತ್ರವನ್ನು ನಿರ್ದೇಶಿಸಿದ್ದರು.
ಚಿತ್ರದ ಕಥೆ ಇಷ್ಟವಾಗಿದ್ದು ಚಿತ್ರದಲ್ಲಿ ಅಭಿನಯಿಸುವುದಾಗಿ ಭರತ್ ಹೇಳಿದ್ದಾರೆ. ಚಿತ್ರದಲ್ಲಿ ಶಾನ್ವಿ ಶ್ರೀವಾತ್ಸವ್ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಚಿತ್ರಕ್ಕೆ ವಿ. ಹರಿಕೃಷ್ಣ ಸಂಗೀತ ಸಂಯೋಜಿಸುತ್ತಿದ್ದು ಅಭಿಲಾಶ್ ಕಲಾತಿ ಅವರ ಛಾಯಾಗ್ರಹಣವಿರಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
SandalwoodShanvi Srivastavasuraj kumarಸ್ಯಾಂಡಲ್ವುಡ್Akhilಅಖಿಲ್Bharathಭರತ್ಶಾನ್ವಿ ಶ್ರೀವಾತ್ಸವ್ಸೂರಜ್ ಕುಮಾರ್Anup Antonyಅನೂಪ್ ಆಂಟೋನಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


