ಸೆ.12ಕ್ಕೆ ಸೂರಿ ನಿರ್ದೇಶನದ 'ಪಾಪ್‌ಕಾರ್ನ್ ಮಂಕಿ ಟೈಗರ್' ಚಿತ್ರದ ಮುಹೂರ್ತ
ದುನಿಯಾ ಸೂರಿ ನಿರ್ದೇಶನದ ಟಗರು ಚಿತ್ರ 25ನೇ ವಾರ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು ಈ ಮಧ್ಯೆ ಅವರ ನಿರ್ದೇಶನದ ಪಾಪ್‌ಕಾರ್ನ್ ಮಂಕಿ ಟೈಗರ್ ಚಿತ್ರದ ಮುಹೂರ್ತ ಸೆಪ್ಟೆಂಬರ್ 12ಕ್ಕೆ ನೆರವೇರಲಿದೆ...

Published On :
ದುನಿಯಾ ಸೂರಿ ನಿರ್ದೇಶನದ ಟಗರು ಚಿತ್ರ 25ನೇ ವಾರ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು ಈ ಮಧ್ಯೆ ಅವರ ನಿರ್ದೇಶನದ ಪಾಪ್‌ಕಾರ್ನ್ ಮಂಕಿ ಟೈಗರ್ ಚಿತ್ರದ ಮುಹೂರ್ತ ಸೆಪ್ಟೆಂಬರ್ 12ಕ್ಕೆ ನೆರವೇರಲಿದೆ.
ಚಿತ್ರದಲ್ಲಿ ಧನಂಜಯ್ ಹಾಗೂ ನಿವೇದಿತಾ ಅಭಿನಯಿಸುತ್ತಿದ್ದು ಗೌರಿ ಹಬ್ಬದ ದಿನ ಚಿತ್ರದ ಮುಹೂರ್ತ ನೆರವೇರಲಿದೆ. ನಂತರ ಸೆ. 18ರಿಂದ ಚಿತ್ರದ ಚಿತ್ರೀಕರಣ ಪ್ರಾರಂಭವಾಗಲಿದೆ.
ಚಿತ್ರಕ್ಕೆ ಕೆಪಿ ಶ್ರೀಕಾಂತ್ ಬಂಡವಾಳ ಹೂಡುತ್ತಿದ್ದಾರೆ. ಚಿತ್ರಕ್ಕೆ ವಿಭಿನ್ನ ಶೀರ್ಷಿಕೆಯ ಸಲಹೆ ನೀಡಿದ್ದು ನಿರ್ಮಾಪಕರ ಪುತ್ರ ಪೃಥ್ವಿ. ಇದೊಂದು ಸಂಪೂರ್ಣ ಎಂಟರ್ಟೈನ್ಮೆಂಟ್ ಚಿತ್ರವಂತೆ.
ಟಗರು ಚಿತ್ರದಲ್ಲಿನ ಮನೋಜ್ಞ ಅಭಿನಯದಿಂದ ಮನೆ ಮಾತಾಗಿದ್ದ ಧನಂಜಯ್ ಇದೀಗ ಕನ್ನಡ ಮತ್ತು ತೆಲುಗಿನಲ್ಲಿ ನಿರ್ಮಾಣವಾಗುತ್ತಿರುವ ಭೈರವಗೀತಾ ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದು ಸೆಪ್ಟೆಂಬರ್ ನಲ್ಲಿ ಸೂರಿ ತಂಡವನ್ನು ಸೇರಿಕೊಳ್ಳಲಿದ್ದಾರೆ.
ಮೊದಲಿಗೆ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆಯಲಿದ್ದು ನಂತರ ಮುಂಬೈನಲ್ಲಿ ಕೆಲ ಭಾಗದ ಚಿತ್ರೀಕರಣ ನಡೆಯಲಿದೆ.
ಸಂಭಾಷಣೆ ಮಾಸ್ತಿ ಮಂಜು ಬರೆಯುತ್ತಿದ್ದು, ಚರಣ್ ರಾಜ್ ಸಂಗೀತ ಸಂಯೋಜಿಸುತ್ತಿದ್ದಾರೆ. ಶೇಖರ್ ರ ಛಾಯಾಗ್ರಹಣವಿರಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
SandalwoodDhananjayಧನಂಜಯ್ನಿವೇದಿತಾಸ್ಯಾಂಡಲ್ವುಡ್SuriಸೂರಿNivedithaPopcorn Monkey Tigerಪಾಪ್‌ಕಾರ್ನ್ ಮಂಕಿ ಟೈಗರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


